ನವದೆಹಲಿ:ಪ್ರಧಾನಿ ಮೋದಿ ಸಂಪುಟ ಪುನರ್ ರಚನೆಯಾಗಿದ್ದು, 43 ಸಂಸದರ ಪೈಕಿ ಕರ್ನಾಟಕದ ನಾಲ್ವರು ಸಂಸದರಿಗೆ ಮಂತ್ರಿಭಾಗ್ಯ ಒಲಿದು ಬಂದಿದೆ. ಆದರೆ ರಾಜ್ಯದ ಯಾರಿಗೂ ಕೂಡ ಕ್ಯಾಬಿನೆಟ್ ದರ್ಜೆಯ ಸ್ಥಾನ ನೀಡಿಲ್ಲ. ರಾಜ್ಯದಿಂದ 22 ಬಿಜೆಪಿ ಸಂಸದರು ಆಯ್ಕೆಯಾಗಿದ್ದರೂ, ಮೋದಿ ಸಚಿವ ಸಂಪುಟದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಅನ್ಯಾಯವಾಗಿದೆ ಎಂಬ ಮಾತು ಕೇಳಿ ಬರಲು ಶುರುವಾಗಿದೆ.
ಮುಂದಿನ ವರ್ಷ ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ಪುನರ್ ರಚನೆ ಮಾಡಲಾಗಿದೆ. ಪ್ರಮುಖವಾಗಿ ಉತ್ತರ ಪ್ರದೇಶದ 7 ಸಂಸದರಿಗೆ ಕೇಂದ್ರ ಸಂಪುಟದಲ್ಲಿ ಅವಕಾಶ ನೀಡಲಾಗಿದೆ. ಕರ್ನಾಟಕದಿಂದಲೂ ಸಂಸದರಾದ ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ, ಭಗವಂತ್ ಖೂಬಾ ಹಾಗೂ ರಾಜೀವ್ ಚಂದ್ರಶೇಖರ್ಗೆ ಸಚಿವ ಸ್ಥಾನ ದೊರೆತಿದೆ. ಎಲ್ಲರಿಗೂ ಕೇಂದ್ರ ಖಾತೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗಿದೆ.
ಇದರ ಮಧ್ಯೆ ಕರ್ನಾಟಕದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾಗಿದ್ದ ಡಿ.ವಿ ಸದಾನಂದಗೌಡ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಹೊಸದಾಗಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿರುವ ಎಲ್ಲರಿಗೂ ಇಂದು ರಾತ್ರಿಯೇ ವಿವಿಧ ಹುದ್ದೆ ನೀಡಲಾಗುವುದು ಎಂದು ತಿಳಿದು ಬಂದಿದೆ.
ಶೋಭಾ ಸಂತಸ