ಅಜ್ಮೇರ್ (ರಾಜಸ್ಥಾನ): ಎರಡು ಟ್ರಕ್ಗಳ ನಡುವೆ ಡಿಕ್ಕಿಯಾಗಿದ್ದು, ಇದರ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಚಾಲಕರು ಸೇರಿದಂತೆ ನಾಲ್ವರು ಸಜೀವ ದಹನವಾಗಿರುವ ಘಟನೆ ಅಜ್ಮೇರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-8 ರಲ್ಲಿ ಸಂಭವಿಸಿದೆ.
ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಬೆಂಕಿಯನ್ನು ನಂದಿಸಿ, ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಚಾಲಕರ ಗುರುತು ಪತ್ತೆ ಮಾಡಲಾಗಿದ್ದು, ಅವರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಮೃತ ಸಹಾಯಕರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅಜ್ಮೇರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸೀತಾರಾಮ್ ಪ್ರಜಾಪತ್ ತಿಳಿಸಿದ್ದಾರೆ.