ಜೋಧಪುರ (ರಾಜಸ್ಥಾನ): ರಾಜಸ್ಥಾನದ ಜೋಧಪುರದಲ್ಲಿ ಭಾರಿ ದುರಂತ ಸಂಭವಿಸಿದೆ. ಮನೆಯೊಂದರಲ್ಲಿ ನಾಲ್ಕು ಸಿಲಿಂಡರ್‌ಗಳು ಸ್ಫೋಟಗೊಂಡು ನಾಲ್ವರು ಸಜೀವ ದಹನವಾಗಿದ್ದು, ಇತರ 16 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಲ್ಲಿನ ಕೀರ್ತಿ ನಗರದ ಮನೆಯೊಂದರಲ್ಲಿ ಶನಿವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಈಗಾಗಲೇ ನಾಲ್ವರ ಮೃತದೇಹಗಳು ಹಾಗೂ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಹಲವರಿಗೆ ಶೇ.80ಕ್ಕೂ ಹೆಚ್ಚು ಸುಟ್ಟ ಗಾಯಗಳಾಗಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.
ಸಿಲಿಂಡರ್ ಸೋರಿಕೆ ಪರಿಶೀಲನೆ ವೇಳೆ ಸ್ಫೋಟ:ಈ ಮನೆಯಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಂಧೆ ನಡೆಸಲಾಗುತ್ತಿತ್ತು ಎನ್ನಲಾಗಿದೆ. ಇಂದು ಮಧ್ಯಾಹ್ನ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯ ಶಂಕೆ ವ್ಯಕ್ತವಾಗಿದೆ. ಈ ವೇಳೆ, ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಬೆಂಕಿಕಡ್ಡಿಯ ಮೂಲಕ ಗ್ಯಾಸ್ ಸೋರಿಕೆಯನ್ನು ಪರಿಶೀಲಿಸಿದ್ದರು. ಆಗ ಸಿಲಿಂಡರ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಅಲ್ಲೇ ಇರಿಸಲಾಗಿದ್ದ ಇತರ ಸಿಲಿಂಡರ್‌ಗಳು ಕೂಡ ಸ್ಫೋಟಿಸಿದೆ. ಒಟ್ಟಾರೆ ಏಕಾಏಕಿ ನಾಲ್ವರು ಸಿಲಿಂಡರ್‌ಗಳು ಸ್ಫೋಟಗೊಂಡಿವೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಸಿಲಿಂಡರ್ ಸ್ಫೋಟದಿಂದ ಎರಡು ಅಂತಸ್ತಿನ ಮನೆ ಕುಸಿತ : ನಾಲ್ವರ ಸಾವು