ಕರ್ನಾಟಕ

karnataka

ETV Bharat / bharat

ಚುನಾವಣೆ ಬಿರುಸಿರುವ ಉತ್ತರ ಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ ನಾಲ್ವರು ಮೃತ, ಹಲವರು ಅಸ್ವಸ್ಥ - ಉತ್ತರಪ್ರದೇಶದಲ್ಲಿ ನಕಲಿ ಮದ್ಯ ದುರಂತ

ಉತ್ತರ ಪ್ರದೇಶದ ರಾಯ್​ಬರೇಲಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ, ನಾಲ್ವರು ಮೃತಪಟ್ಟು, ಹಲವರು ಅಸ್ವಸ್ಥರಾಗಿರುವ ಘಟನೆ ನಡೆದಿದ್ದು, ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

four people died and many critical condition due to take illicit liquor in raebareli
ಚುನಾವಣಾ ಬಿರುಸಿರುವ ಉತ್ತರ ಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ ನಾಲ್ವರು ಮೃತ, ಹಲವರು ಅಸ್ವಸ್ಥ

By

Published : Jan 26, 2022, 10:42 AM IST

ರಾಯ್​ಬರೇಲಿ(ಉತ್ತರ ಪ್ರದೇಶ): ವಿಧಾನಸಭಾ ಚುನಾವಣಾ ಕಸರತ್ತು ಬಿರುಸುಗೊಂಡಿರುವ ನಡುವೆಯೇ ಉತ್ತರ ಪ್ರದೇಶದ ರಾಯ್​ಬರೇಲಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ, ನಾಲ್ವರು ಮೃತಪಟ್ಟು, ಹಲವರು ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ರಾಯ್​ಬರೇಲಿಯ ಮಹಾರಾಜಗಂಜ್​ನ ಕೊತ್ವಾಲಿ ಕ್ಷೇತ್ರದ ಪಹಾಡ್​ಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಸುಮಾರು 12 ಮಂದಿ ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ. ಅಸ್ವಸ್ಥರನ್ನು ಹಾರಾಜಗಂಜ್ ಸಿವಿಲ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸ್ ಮತ್ತು ಇತರ ಅಧಿಕಾರಿಗಳು ಗ್ರಾಮಕ್ಕೆ ಧಾವಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಸೋಮವಾರ ಮದುವೆ ಕಾರ್ಯಕ್ರಮವೊಂದರಲ್ಲಿ ನಕಲಿ ಮದ್ಯ ಸೇವನೆ ಮಾಡಿದ ನಂತರ ಈ ದುರ್ಘಟನೆ ನಡೆದಿದೆ ಎಂದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ ಎಂದು ಜಿಲ್ಲಾಧಿಕಾರಿ ವೈಭವ್ ಶ್ರೀವಾಸ್ತವ ಸ್ಪಷ್ಟನೆ ನೀಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುತ್ತದೆ. ಇನ್ನೂ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಈ ಕುರಿತು ತನಿಖೆ ನಡೆಸಲಾಗುತ್ತದೆ ಎಂದು ವೈಭವ್ ಶ್ರೀವಾಸ್ತವ ಹೇಳಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details