ಆಂಧ್ರಪ್ರದೇಶ: ಸಂಕ್ರಾಂತಿ ಸಂಭ್ರಮದಂದೇ ಆಂಧ್ರಪ್ರದೇಶದಲ್ಲಿ ದುರಂತವೊಂದು ಸಂಭವಿಸಿದೆ. ತಡೆಪಲ್ಲಿಗುಡೆಂನಲ್ಲಿ ಮೀನು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ಪಲ್ಟಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಮುಂಜಾನೆ ಪಶ್ಚಿಮ ಗೋದಾವರಿ ಜಿಲ್ಲೆಯ ತಡೆಪಲ್ಲಿಗುಡೆಂನಲ್ಲಿ ಮೀನು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.