ಕರ್ನಾಟಕ

karnataka

ETV Bharat / bharat

ಭೀಕರ ಅಪಘಾತ: ಹೊಸ ವರ್ಷವೇ ಇಬ್ಬರು ಮಕ್ಕಳು ಸೇರಿ ನಾಲ್ವರ ದುರ್ಮರಣ - ಯುಪಿಯಲ್ಲಿ ಭೀಕರ ರಸ್ತೆ ಅಪಘಾತ

ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಜವರಾಯನ ಅಟ್ಟಹಾಸಕ್ಕೆ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು, ಇದರಲ್ಲಿ ಇಬ್ಬರು ಮಕ್ಕಳು ಸೇರಿಕೊಂಡಿದ್ದಾರೆ.

Moradabad
Moradabad

By

Published : Jan 1, 2021, 4:11 PM IST

ಮೊರಾದಾಬಾದ್ ​(ಉತ್ತರ ಪ್ರದೇಶ): ಹೊಸ ವರ್ಷದ ದಿನವೇ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾಗಿರುವ ಘಟನೆ ಮೊರಾದಾಬಾದ್​ನಲ್ಲಿ ನಡೆದಿದೆ.

ಭೀಕರ ರಸ್ತೆ ಅಪಘಾತ

ಇಂದು ಬೆಳಗ್ಗೆ ಚಂಡೀಗಢದಿಂದ ವಾಪಸ್​ ಆಗುತ್ತಿದ್ದ ವೇಳೆ ಮೊರಾದಾಬಾದ್​ನ ಚಜ್ಲಾತ್​ ಪೊಲೀಸ್ ಠಾಣೆ ಪ್ರದೇಶದಲ್ಲಿ ವಾಹನ ಅಪಘಾತಕ್ಕೀಡಾಗಿದೆ. ಪರಿಣಾಮ ಇಬ್ಬರು ಮಕ್ಕಳು ಹಾಗೂ ದಂಪತಿ ಸಾವನ್ನಪ್ಪಿದ್ದು, ಉಳಿದಂತೆ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರೆಲ್ಲರೂ ಉತ್ತರ ಪ್ರದೇಶದವರು ಎಂದು ತಿಳಿದು ಬಂದಿದೆ. ಕೆಲಸದ ನಿಮಿತ್ಯವಾಗಿ ಚಂಡೀಗಢಕ್ಕೆ ತೆರಳಿದ್ದರು.

ಮೊರಾದಾಬಾದ್​ನಲ್ಲಿ ಭೀಕರ ಅಪಘಾತ

ವಾಹನದಲ್ಲಿ 20ಕ್ಕೂ ಹೆಚ್ಚು ಮಹಿಳೆಯರು, ಕೆಲ ಪುರುಷರು ಹಾಗೂ ಮಕ್ಕಳು ಇದ್ದರು ಎಂದು ತಿಳಿದು ಬಂದಿದೆ. ಇವರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಹಿಂಬದಿಯಿಂದ ಟ್ರಕ್​ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಟ್ರಕ್​ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.

ABOUT THE AUTHOR

...view details