ನಾಗೌರ್, ರಾಜಸ್ಥಾನ:ಅತಿ ವೇಗವಾಗಿ ಬಂದ ಖಾಸಗಿ ಬಸ್ ಬೈಕ್ಗೆ ಡಿಕ್ಕಿಯಾಗಿ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ನಾಗೌರ್ ಜಿಲ್ಲೆಯ ದಿಡ್ವಾನಾ ಉಪ ವಿಭಾಗದ ತೋಶಿನಾ ಗ್ರಾಮದಲ್ಲಿ ನಡೆದಿದೆ.
ಭೀಕರ ರಸ್ತೆ ಅಪಘಾತ: ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ದುರ್ಮರಣ - road accident in nagaur
ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ನಡೆದಿದೆ.
ಭೀಕರ ರಸ್ತೆ ಅಪಘಾತ: ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ದುರ್ಮರಣ
ಬೈಕ್ನಲ್ಲಿದ್ದ ಪತಿ, ಪತ್ನಿ ಮತ್ತು ಇಬ್ಬರು ಮುಗ್ಧ ಮಕ್ಕಳು ಸಾವನ್ನಪ್ಪಿದ್ದರೆ, ಮತ್ತೋರ್ವ ಬಾಲಕಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಖುಂಖುನಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಘಟನೆಯ ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ತೋಶಿನಾದ ಸರ್ಕಾರಿ ಆಸ್ಪತ್ರೆಗೆ ಮೃತದೇಹಗಳನ್ನು ಸಾಗಿಸಲಾಗಿದೆ.