ಪ್ರಕಾಶಂ (ಆಂಧ್ರಪ್ರದೇಶ):ಮದುವೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿರುವ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪ್ರಕಾಶಂನಲ್ಲಿ ನಡೆದಿದೆ. ದುರ್ಘಟನೆ ವೇಳೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಂಧ್ರಪ್ರದೇಶದ ಪ್ರಕಾಶಂನಲ್ಲಿ ಈ ಅವಘಡ ಸಂಭವಿಸಿದೆ.
ಘಟನೆಯಲ್ಲಿ ಸಾವನ್ನಪ್ಪಿದವರು ವಧುವಿನ ಕಡೆಯವರೆಂದು ತಿಳಿದು ಬಂದಿದ್ದು, ಪೊಡಿಲಿ - ಮಾರ್ಕಾಪುರ್ ಎಕ್ಸ್ಪ್ರೆಸ್ವೇನಲ್ಲಿ ಈ ಭೀಕರ ರಸ್ತೆ ಅಪಘಾತ ನಡೆದಿದೆ. ಮದುವೆ ಸಮಾರಂಭದಲ್ಲಿ ಭಾಗಿಯಾಗಲು ವಧುವಿನೊಂದಿಗೆ ಎಲ್ಲರೂ ಪ್ರಯಾಣ ಬೆಳೆಸಿದ್ದರು. ರಭಸವಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ಕೆಲವರು ಆಟೋದಿಂದ ಕೆಳಗೆ ಬಿದ್ದಿರುವ ಪರಿಣಾಮ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ.