ಕರ್ನಾಟಕ

karnataka

ETV Bharat / bharat

ಮುಂಬೈನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ..ಅವಶೇಷಗಳ ಅಡಿ ಹಲವರು ಸಿಲುಕಿರುವ ಶಂಕೆ - ಮುಂಬೈನ ನಾಲ್ಕು ಅಂತಸ್ತಿನ ಕಟ್ಟಡ

ಇಂದು ಬೆಳಗ್ಗೆ ಮುಂಬೈನ ಪಶ್ಚಿಮ ಬೊರಿವಲಿಯಲ್ಲಿರುವ ಸಾಯಿಬಾಬಾ ನಗರದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಅವಶೇಷಗಳ ಅಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Four storey building collapses in Mumbai, some people feared trapped
Four storey building collapses in Mumbai, some people feared trapped

By

Published : Aug 19, 2022, 2:26 PM IST

ಮುಂಬೈ (ಮಹಾರಾಷ್ಟ್ರ):ಮುಂಬೈನ ಬೊರಿವಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಇಂದು ಕುಸಿದಿದೆ. ಕಟ್ಟಡದ ಅವಶೇಷಗಳ ಅಡಿ ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮುಂಬೈನ ಪಶ್ಚಿಮ ಬೊರಿವಲಿಯಲ್ಲಿರುವ ಸಾಯಿಬಾಬಾ ನಗರದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಇದಾಗಿದ್ದು ಇಂದು (ಶುಕ್ರವಾರ) ಮಧ್ಯಾಹ್ನ 12ಕ್ಕೆ ಈ ದುರಂತ ಸಂಭವಿಸಿದೆ.

ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪಿದ್ದು ಪರಿಶೀಲನೆ ಮಾಡುತ್ತಿದೆ. ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ, ಗಾಯಗಳಾಗಿರುವ ಬಗ್ಗೆ ವರದಿ ಆಗಿಲ್ಲ. ಆದರೆ, ಶಿಥಿಲಗೊಂಡಿರುವ ಈ ಕಟ್ಟಡ ಬೀಳುವ ಹಂತದಲ್ಲಿದ್ದು ಜನರನ್ನು ಅಲ್ಲಿಂದ ಖಾಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅವಶೇಷಗಳ ಅಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕದಳದ ವಾಹನ ಹಾಗೂ ಆ್ಯಂಬುಲೆನ್ಸ್ ಘಟನಾ ಸ್ಥಳದಲ್ಲಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ABOUT THE AUTHOR

...view details