ಕರೀಂನಗರ (ತೆಲಂಗಾಣ) : ವೇಗವಾಗಿ ಬಂದ ಕಾರೊಂದು ಗುಡಿಸಲಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಮೃತಪಟ್ಟಿದ್ದು, ಮೂವರು ಮಹಿಳೆಯರು ಗಾಯಗೊಂಡಿರುವ ಘಟನೆ ತೆಲಂಗಾಣದ ಕರೀಂನಗರದಲ್ಲಿ ನಡೆದಿದೆ.
ಇಂದು ಬೆಳಗ್ಗೆ 7 ಗಂಟೆಗೆ ವೇಳೆಗೆ ಕರೀಂನಗರ ನಗರದ ಕಮಾನ್ ಪ್ರದೇಶದಲ್ಲಿ ರಸ್ತೆ ಬಳಿ ಇದ್ದ ಗುಡಿಸಲಿಗೆ ಕಾರು ಡಿಕ್ಕಿ ಹೊಡೆದಿದೆ. ಗುಡಿಸಲೊಳಗೆ ಒಟ್ಟು ಆರು ಮಹಿಳೆಯರು ಕೆಲಸ ಮಾಡುತ್ತಿದ್ದರು. ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಮೂವರು ಮಹಿಳೆಯರು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ.