ಕರ್ನಾಟಕ

karnataka

ETV Bharat / bharat

ಗದ್ದೆ ಕೆಲಸಕ್ಕೆ ಹೋಗ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಲಾರಿ.. ಸ್ಥಳದಲ್ಲೇ ನಾಲ್ವರು ಮಹಿಳೆಯರು ಸಾವು - ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ

ತೆಲಂಗಾಣದ ಭದ್ರಾದಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಮಹಿಳೆಯರು ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ..

lorry hits a vechicle in telangana
lorry hits a vechicle in telangana

By

Published : Jan 28, 2022, 5:29 PM IST

ಭದ್ರಾದ್ರಿ(ತೆಲಂಗಾಣ):ಗದ್ದೆ ಕೆಲಸಕ್ಕೆ ಹೋಗುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದಿರುವ ಪರಿಣಾಮ ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಭದ್ರಾದ್ರಿಯಲ್ಲಿ ನಡೆದಿದೆ.

ಗದ್ದೆ ಕೆಲಸಕ್ಕೆ ಹೋಗ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಲಾರಿ

ಭದ್ರಾದ್ರಿಯ ಕೊತಗುಡೆಂ ಜಿಲ್ಲೆಯ ತಿಪ್ಪನಪಲ್ಲಿಯಲ್ಲಿ ಈ ದುರ್ಘಟನೆ ನಡೆದಿದ್ದು, ಕಲ್ಲಿದ್ದಲು ತುಂಬಿಕೊಂಡು ಹೋಗುತ್ತಿದ್ದ ಲಾರಿ, ಟೆಂಪೊವಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವಾಹನದಲ್ಲಿದ್ದ 12 ಜನರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ 8 ಸದಸ್ಯರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಇದನ್ನೂ ಓದಿರಿ:ಭಾರತ್​ ಬಯೋಟೆಕ್​​ನ ಇಂಟ್ರಾನಾಸಲ್​​​ ಕೋವಿಡ್ ಬೂಸ್ಟರ್ ಡೋಸ್ ಪ್ರಯೋಗಕ್ಕೆ ಅನುಮೋದನೆ

ಕೂಲಿ ಕಾರ್ಮಿಕರು ಸಾತುಪಲ್ಲಿ ಗ್ರಾಮಕ್ಕೆ ಭತ್ತದ ಗದ್ದೆ ಕೆಲಸಕ್ಕೆ ತೆರಳುತ್ತಿದ್ದರು. ಮೃತ ಮಹಿಳೆಯರನ್ನ ಕತಿ ಸ್ವಾತಿ, ಸಾಯಮ್ಮ, ಲಕ್ಷ್ಮಿ ಎಂದು ಗುರುತಿಸಲಾಗಿದ್ದು, ಮತ್ತೋರ್ವ ಮಹಿಳೆ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇವರೆಲ್ಲರೂ ಕೊತಗುಡೆಂ ಸಮೀಪದ ಸುಜಾತನಗರದ ನಿವಾಸಿಗಳು ಎಂದು ತಿಳಿದು ಬಂದಿದೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details