ಕರ್ನಾಟಕ

karnataka

ETV Bharat / bharat

ದೇವಸ್ಥಾನಕ್ಕೆ ತೆರಳಿದ್ದ ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ - ಸಾಮೂಹಿಕ ಅತ್ಯಾಚಾರ ಪ್ರಕರಣಗಳು 2020

ದೇವಸ್ಥಾನಕ್ಕೆ ತೆರಳಿದ್ದ ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿದ ಕಾಮುಕರ ತಂಡ ಏಕಾಂತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಕ್ರೌರ್ಯ ನಡೆದಿದ್ದು ಬಾಲಕಿ ಕಳೆದ ಮೂರು ದಿನಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲೇ ಇದ್ದಾಳೆ.

Four-year-old gangraped in Delhi
ಸಾಂದರ್ಭಿಕ ಚಿತ್ರ

By

Published : Nov 7, 2020, 6:15 PM IST

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಬವಾನಾ ಎಂಬ ಪ್ರದೇಶದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ಕಾಮುಕರ ತಂಡವೊಂದು ಸಾಮೂಹಿಕ ಅತ್ಯಾಚಾರ ನಡೆಸಿದೆ ಎನ್ನಲಾಗುತ್ತಿದೆ.

ನವೆಂಬರ್ 4 ರಂದು ಪ್ರಕರಣ ನಡೆದಿದ್ದು ಇಂದು ಬೆಳಕಿಗೆ ಬಂದಿದೆ. ಕಾಲೊನಿಯ ಇತರ ಮಕ್ಕಳೊಂದಿಗೆ ದೇವಸ್ಥಾನಕ್ಕೆ ತೆರಳಿದ್ದಾಗ ದುರುಳರು ಬಾಲಕಿಯ ಮೇಲೆ ಕ್ರೌರ್ಯ ಮೆರೆದಿದ್ದಾರೆ ಎನ್ನಲಾಗುತ್ತಿದೆ.

ಹತ್ತಿರದಲ್ಲೇ ಇದ್ದ ದೇವಸ್ಥಾನದಲ್ಲಿ ಪ್ರತಿ ದಿನ ಪ್ರಸಾದ ನೀಡಲಾಗುತ್ತಿತ್ತು. ಎಂದಿನಂತೆ ಅಂದು ಪ್ರಸಾದವನ್ನು ತೆಗೆದುಕೊಂಡು ಬರಲು ಹೋದಾಗ ಬಾಲಕಿಯನ್ನು ಅಪಹರಿಸಿದ ಕಾಮುಕರ ತಂಡ ಏಕಾಂತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಬಾಲಕಿಗೆ ಭಾರೀ ರಕ್ತಸ್ರಾವ ಕಂಡುಬಂದಿದ್ದರಿಂದ ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

ಬಾಲಕಿಯ ಸ್ಥಿತಿ ಗಂಭೀರವಾಗಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿರುವುದರಿಂದ ಕಳೆದ ಮೂರು ದಿನಗಳಿಂದ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಳೆ ಎಂದು ಸಂತ್ರಸ್ತೆಯ ಕುಟುಂಬ ಸದಸ್ಯರು ನೋವು ತೋಡಿಸಿಕೊಂಡಿಕದ್ದಾರೆ. ಈ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದು ಹೆಚ್ಚಿನ ತನಿಖೆ ನಡೆಸಿದ್ದಾರೆ.

ABOUT THE AUTHOR

...view details