ಕರ್ನಾಟಕ

karnataka

ETV Bharat / bharat

ನಾಲ್ಕು ವರ್ಷದ ಬಾಲಕಿ ಮೇಲೆ ಚುನಾವಣಾ ಕರ್ತವ್ಯದಲ್ಲಿದ್ದ ಎಸ್ಐನಿಂದ ಅತ್ಯಾಚಾರ - ಎಸ್ಐ​ಯನ್ನು ಹಿಡಿದು ಥಳಿಸಿದ ಗ್ರಾಮಸ್ಥರು

Four Year Old Girl Raped By Cop in Rajasthan: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಾಲ್ಕು ವರ್ಷದ ಪುಟ್ಟ ಬಾಲಕಿ ಮೇಲೆ ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.

Etv Bharat
Etv Bharat

By ETV Bharat Karnataka Team

Published : Nov 11, 2023, 2:44 PM IST

ದೌಸಾ (ರಾಜಸ್ಥಾನ): ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿರುವ ರಾಜಸ್ಥಾನದಲ್ಲಿ ಮತ್ತೊಂದು ಹೇಯ ಘಟನೆ ನಡೆದಿದೆ. ದೌಸಾ ಜಿಲ್ಲೆಯಲ್ಲಿ ನಾಲ್ಕು ವರ್ಷದ ಪುಟ್ಟ ಬಾಲಕಿ ಮೇಲೆ ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಆರೋಪಿ ಸಬ್ ಇನ್ಸ್‌ಪೆಕ್ಟರ್ ಭೂಪೇಂದ್ರ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಆರೋಪಿ, ಸಬ್ ಇನ್ಸ್‌ಪೆಕ್ಟರ್​​ ಭೂಪೇಂದ್ರ ಸಿಂಗ್​ ಶುಕ್ರವಾರ ಸಂಜೆ ಬಾಲಕಿಯನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ದೂರಲಾಗಿದೆ. ಈ ಕುರಿತು ಸಂತ್ರಸ್ತೆಯ ಕುಟುಂಬದ ದೂರಿನ ಆಧಾರದ ಮೇಲೆ ಆರೋಪಿ ಎಸ್‌ಐ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ದೌಸಾ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಂದಿತಾ ರಾಣಾ ತಿಳಿಸಿದ್ದಾರೆ. ಮತ್ತೊಂದೆಡೆ, ಎಸ್‌ಐ ದುಷ್ಕೃತ್ಯ ಖಂಡಿಸಿ ಇಂದು ಬೆಳಗ್ಗೆ ಪೊಲೀಸ್ ಠಾಣೆಯ ಹೊರಗೆ ಗ್ರಾಮಸ್ಥರು ಪ್ರತಿಭಟನೆ ಆರಂಭಿಸಿದ್ದಾರೆ. ಅಲ್ಲದೇ, ಆರೋಪಿ ಎಸ್ಐ​ಯನ್ನು ಹಿಡಿದು ಥಳಿಸಿದ ಗ್ರಾಮಸ್ಥರು, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂತ್ರಸ್ತೆಯ ತಂದೆ ಮೇಲೆ ಹಲ್ಲೆ:ಇದಕ್ಕೂ ಮುನ್ನ ಈ ಘಟನೆಯ ಬಗ್ಗೆ ಸಂತ್ರಸ್ತ ಬಾಲಕಿಯ ಪೋಷಕರು ದೂರು ನೀಡಲು ರಾಹುವಾಸ್ ಪೊಲೀಸ್ ಠಾಣೆಗೆ ತೆರಳಿದ್ದರು. ಆದರೆ, ಅಲ್ಲಿ ಸಂತ್ರಸ್ತೆಯ ತಂದೆ ಮೇಲೆಯೇ ಪೊಲೀಸರು ಮೇಲೆ ಹಲ್ಲೆ ನಡೆಸಿರುವ ಆರೋಪ ಸಹ ಕೇಳಿ ಬಂದಿದೆ. ನಾವು ದೂರು ಕೊಡಲು ಠಾಣೆಗೆ ತಲುಪಿದಾಗ ಆರೋಪಿಯು ಇತರ ಕೆಲವು ಪೊಲೀಸರೊಂದಿಗೆ ಸೇರಿಕೊಂಡು ನನಗೆ ಥಳಿಸಿದ್ದು, ನನ್ನ ಕೈ ಮುರಿದಿದೆ ಎಂದು ಸಂತ್ರಸ್ತೆಯ ತಂದೆ ತಿಳಿಸಿದ್ದಾರೆ.

ಈ ವಿಷಯ ತಿಳಿದ ಗ್ರಾಮಸ್ಥರು ರಾಹುವಾಸ್ ಠಾಣೆಯ ಹೊರಗೆ ಜಮಾಯಿಸಿ ಪೊಲೀಸರ ವಿರುದ್ಧ ಘೋಷಣೆ ಕೂಗಿದ್ದಾರೆ. ಆರೋಪಿಯನ್ನು ಠಾಣೆಯ ಹೊರಗೆ ಎಳೆದುತಂದು ಥಳಿಸಿದ್ದಾರೆ. ಎಸ್​ಐಗೆ ಥಳಿಸುತ್ತಿರುವ ಹಲ್ಲೆಯ ವಿಡಿಯೋ ಕೂಡ ವೈರಲ್ ಆಗಿದೆ. ಠಾಣೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಎಲ್ಲ ಸಿಬ್ಬಂದಿಯನ್ನು ಅಮಾನತು ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ:ಮತ್ತೊಂದೆಡೆ, ಸ್ಥಳಕ್ಕಾಗಮಿಸಿದ ಬಿಜೆಪಿ ಸಂಸದ ಹಾಗೂ ಸವಾಯಿ ಮಾಧೋಪುರದ ಅಭ್ಯರ್ಥಿ ಡಾ.ಕಿರೋರಿ ಲಾಲ್ ಮೀನಾ, ಸಂತ್ರಸ್ತ ಕುಟುಂಬಕ್ಕೆ 85 ಲಕ್ಷ ರೂಪಾಯಿ ಆರ್ಥಿಕ ನೆರವು ಕಲ್ಪಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಜೊತೆಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪೊಲೀಸ್ ಠಾಣೆಯೊಳಗೆ ಸಂತ್ರಸ್ತೆಯ ಕುಟುಂಬದ ಮೇಲೆ ಹಲ್ಲೆ ನಡೆಸಿರುವುದು ರಾಜ್ಯದ ದುಃಸ್ಥಿತಿ ತೋರಿಸುತ್ತದೆ ಎಂದು ಸಂಸದರು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರ ಪ್ರಕಾಶ್​ ಜೋಶಿ ಕೂಡ ರಾಜ್ಯ ಸರ್ಕಾರ ವಿರುದ್ಧ ಟೀಕಾ ಪ್ರಹಾರ ಮಾಡಿದ್ದಾರೆ. ಪೊಲೀಸರೇ ಇಂತಹ ಕೃತ್ಯ ಎಸಗಿರುವುದು ದುರದೃಷ್ಟಕರ. ಅಲ್ಲದೇ, ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆಯ ಹೊಣೆ ಹೊತ್ತಿಕೊಂಡಿರುವ ಅಶೋಕ್ ಗೆಹ್ಲೋಟ್ ಬಗ್ಗೆಯೂ ನಾಚಿಕೆ ಪಡುವಂತಾಗಿದೆ. ಇಂತಹ ಘಟನೆಗಳು ರಾಜಕ್ಕೆ ಕಳಂಕ ಎಂದು ಬಿಜೆಪಿ ನಾಯಕರು ದೂರಿದ್ದಾರೆ. ಠಾಣೆಯ ಹೊರಗೆ ಪರಿಸ್ಥಿತಿ ಉದ್ವಿಗ್ನವಾಗಿರುವುದರಿಂದ ಎಎಸ್ಪಿ ನೇತೃತ್ವದಲ್ಲಿ ಹೆಚ್ಚುವರಿ ಭದ್ರತೆ ಕಲ್ಪಿಸಲಾಗಿದೆ.

ಇದನ್ನೂ ಓದಿ:ಆಶ್ರಮ ಶಾಲೆಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮುಖ್ಯೋಪಾಧ್ಯಾಯ ಸೇರಿ ಇಬ್ಬರು ಶಿಕ್ಷಕರ ಸೆರೆ

ABOUT THE AUTHOR

...view details