ಕರ್ನಾಟಕ

karnataka

ETV Bharat / bharat

ಸ್ನಾನಕ್ಕೆ ತೆರಳಿದ್ದ ನಾಲ್ವರು ಬಾಲಕರು ನೀರಲ್ಲಿ ಮುಳುಗಿ ಸಾವು: ಮೂವರ ಮೃತದೇಹ ಪತ್ತೆ, ಒಬ್ಬನಿಗೆ ಶೋಧ - ಯಮುನಾ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ನಾಲ್ವರು ಬಾಲಕರು

ಯಮುನಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ನಾಲ್ವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಪೈಕಿ ಮೂವರ ಮೃತದೇಹಗಳು ಪತ್ತೆಯಾಗಿದ್ದು, ಒಬ್ಬ ಬಾಲಕನ ಮೃತದೇಹಕ್ಕಾಗಿ ಶೋಧ ನಡೆಯುತ್ತಿದೆ.

boys drowned in burari yamuna
ಸ್ನಾನಕ್ಕೆ ತೆರಳಿದ್ದ ನಾಲ್ವರು ಬಾಲಕರು ನೀರಿನಲ್ಲಿ ಮುಳುಗಿ ಸಾವು

By

Published : Jul 8, 2022, 5:12 PM IST

ನವದೆಹಲಿ:ಈಶಾನ್ಯ ದೆಹಲಿಯ ಬುರಾರಿ ಪ್ರದೇಶದಲ್ಲಿ ಯಮುನಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ನಾಲ್ವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಮೂವರ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಓರ್ವ ಬಾಲಕನ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಇವರೆಲ್ಲಾ ಲೋನಿಯ ನಿವಾಸಿಗಳೆಂದು ತಿಳಿದುಬಂದಿದೆ. ಮೂವರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಕಮಲ್ (17), ಇಲ್ಯಾಸ್ (20) ಮತ್ತು ವಾಸಿಂ (15) ಮೃತರೆಂದು ಗುರುತಿಸಲಾಗಿದೆ. ನಾಲ್ವರು ಬಾಲಕರು ಗುರುವಾರ ಮಧ್ಯಾಹ್ನ 1.30ಕ್ಕೆ ಯಮುನಾದಲ್ಲಿ ಸ್ನಾನಕ್ಕೆ ತೆರಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸಂಜೆಯಾದರೂ ಎಲ್ಲರೂ ಮನೆಗೆ ಬಾರದೇ ಇದ್ದಾಗ ಮನೆಯವರು ಹುಡುಕಾಟ ಆರಂಭಿಸಿದ್ದಾರೆ. ಬಾಲಕರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಸುದ್ದಿ ಬುರಾರಿ ಪೊಲೀಸ್ ಠಾಣೆಗೆ ಬಂದಿತ್ತು. ಇದಾದ ಬಳಿಕ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು.

ಇದನ್ನೂ ಓದಿ:ಮರಳು ತುಂಬುತ್ತಿದ್ದಾಗ ದಿಢೀರ್​ ಪ್ರವಾಹ: ಟಿಪ್ಪರ್​ ಸಹಿತ ಕೊಚ್ಚಿಹೋದ ಚಾಲಕ, ಸಹಾಯಕ

ABOUT THE AUTHOR

...view details