ನವದೆಹಲಿ:ದೆಹಲಿಯಲ್ಲಿ ಉಂಟಾಗಿದ್ದ ಆಕ್ಸಿಜನ್ ಸಮಸ್ಯೆ ಇದೀಗ ಮುಕ್ತಾಯಗೊಂಡಿದ್ದು, ಮುಂದಿನ ಮೂರು ತಿಂಗಳಲ್ಲಿ ಎಲ್ಲರಿಗೂ ಕೊರೊನಾ ವ್ಯಾಕ್ಸಿನ್ ನೀಡಲಾಗುವುದು ಎಂದು ದೆಹಲಿ ಸಿಎಂ ಕೇಜ್ರಿವಾಲ್ ತಿಳಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ದೆಹಲಿಯಲ್ಲಿ ಕೋವಿಡ್ ಸಮಸ್ಯೆ ಉಲ್ಭಣಗೊಂಡಿದ್ದು, ಆಕ್ಸಿಜನ್ ಕೊರತೆ ಸಹ ಉಂಟಾಗಿತ್ತು. ಇದೀಗ ಕೇಂದ್ರ ಸರ್ಕಾರ ಸಮಪರ್ಕ ಆಕ್ಸಿಜನ್ ನೀಡಿರುವ ಕಾರಣ ಆ ಸಮಸ್ಯೆ ಮುಗಿದಿದೆ ಎಂದು ಸಿಎಂ ತಿಳಿಸಿದರು.
ಇದನ್ನೂ ಓದಿ: ಚೆನ್ನೈ ಏರ್ಪೋರ್ಟ್ನಲ್ಲಿ 100 ಕೋಟಿ ರೂ. ಮೌಲ್ಯದ ಹೆರಾಯಿನ್ ವಶಕ್ಕೆ, ಇಬ್ಬರ ಬಂಧನ
ಅಲ್ಲಿನ ಸಚಿವರೊಂದಿಗೆ ತುರ್ತು ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿದ ಕೇಜ್ರಿವಾಲ್, ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಉದ್ಭವಗೊಂಡಿದ್ದ ಆಕ್ಸಿಜನ್ ಸಮಸ್ಯೆ ಇದೀಗ ಮುಕ್ತಾಯಗೊಂಡಿದೆ. ಯಾವುದೇ ರೋಗಿ ಆಮ್ಲಜನಕ ಸಮಸ್ಯೆಯಿಂದ ತೊಂದರೆಗೊಳಗಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಹಿಂದೆ ಹೇಳಿರುವ ಪ್ರಕಾರ ಮುಂದಿನ ಮೂರು ತಿಂಗಳಲ್ಲಿ ವ್ಯಾಕ್ಸಿನ್ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ, ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲರಿಗೂ ಉಚಿತವಾಗಿ ಕೋವಿಡ್ ವ್ಯಾಕ್ಸಿನ್ ನೀಡುವುದಾಗಿ ಘೋಷಣೆ ಮಾಡಿರುವ ಕೇಜ್ರಿವಾಲ್, ಅವರ ಕಚೇರಿಗಳಲ್ಲೇ ವ್ಯಾಕ್ಸಿನೇಷನ್ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು. ದೆಹಲಿಯಲ್ಲಿ ಕಳೆದ 24ಗಂಟೆಯಲ್ಲಿ ದಾಖಲೆಯ 19,832 ಕೋವಿಡ್ ಪ್ರಕರಣ ದಾಖಲಾಗಿದ್ದು, 341 ಜನರು ಸಾವನ್ನಪ್ಪಿದ್ದಾರೆ.