ಹೌರಾ: ಪ್ರವಾದಿ ಮುಹಮ್ಮದ್ ಹೇಳಿಕೆಯನ್ನು ವಿರೋಧಿಸಿ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಹಿಂಸಾಚಾರ ನಡೆದಿದ್ದು, ಪಾಂಚಾಲ ಬಜಾರ್‌ನಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ಘರ್ಷಣೆ ಉಂಟಾಗಿದೆ. ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಅವರನ್ನು ಚದುರಿಸಲು ಅಶ್ರುವಾಯು ಶೆಲ್‌ಗಳನ್ನು ಉಪಯೋಗಿಸಿದ್ದಾರೆ. ಇದಕ್ಕೂ ಮುನ್ನ ಶುಕ್ರವಾರವೂ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದ್ದರು.
ಶನಿವಾರ ಬೆಳಗ್ಗೆ ಪಾಂಚಾಲ ಬಜಾರ್‌ನಲ್ಲಿ ಪ್ರತಿಭಟನಾಕಾರರು ಮತ್ತೆ ಜಮಾಯಿಸಿದ್ದರು. ಪೊಲೀಸರು ಇವರನ್ನು ತಡೆಯಲು ಮುಂದಾದಾಗ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಅವರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನೂ ಪ್ರಯೋಗಿಸಿದರು.
ಓದಿ:ನೂಪುರ್ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಹಿಂಸಾಚಾರ ಹೆಚ್ಚಳ ಸಾಧ್ಯತೆ: ಹೈ ಅಲರ್ಟ್ ಆದ ರಾಜ್ಯ ಪೊಲೀಸರು
ಪ್ರತಿಭಟನಾಕಾರರು ಹಿಂದೆ ಸರಿಯುತ್ತಲೇ ಕಲ್ಲು ತೂರಾಟ ನಡೆಸಿದರು. ಇದಕ್ಕೂ ಮುನ್ನ ಶುಕ್ರವಾರವೂ ಧುಲಾಘರ್, ಪಾಂಚಾಲ ಮತ್ತು ಉಲುಬೇರಿಯಾದಲ್ಲಿ ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರು. ಗುಂಪು ಚದುರಿಸಲು ಪೊಲೀಸರು ಧುಲಾಘರ್ ಮತ್ತು ಪಂಚಲಾದಲ್ಲಿ ಲಾಠಿ ಚಾರ್ಜ್ ಮಾಡಿದ್ದರು. ಈ ಪ್ರದೇಶದಲ್ಲಿ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರಿಂದ ಹಲವು ವಾಹನಗಳಿಗೆ ಹಾನಿಯಾಗಿದೆ.
ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಹೇಳಿಕೆಯನ್ನು ವಿರೋಧಿಸಿ ಶುಕ್ರವಾರದ ಪ್ರಾರ್ಥನೆಯ ನಂತರ ಮುಸ್ಲಿಮರು ದೇಶದ ಹಲವು ನಗರಗಳಲ್ಲಿ ಪ್ರತಿಭಟನೆ ನಡೆಸಿದ್ದರು ಎಂಬುದು ಗಮನಿಸಬೇಕಾದ ಸಂಗತಿ. ದೆಹಲಿ, ಕೋಲ್ಕತ್ತಾ, ಹೌರಾ, ಪ್ರಯಾಗ್‌ರಾಜ್, ಹೈದರಾಬಾದ್, ಸಹರಾನ್‌ಪುರ ಸೇರಿದಂತೆ ಇತರ ನಗರಗಳಲ್ಲಿ ಪ್ರತಿಭಟನಾಕಾರರು ನೂಪುರ್ ಶರ್ಮಾ ಬಂಧನಕ್ಕೆ ಒತ್ತಾಯಿಸಿದ್ದಾರೆ.