ನವದೆಹಲಿ: ದೇಶದಲ್ಲಿ ಹೊಸದಾಗಿ 2,47,417 ಮಂದಿಯಲ್ಲಿ ಕೋವಿಡ್ ಕಾಣಿಸಿಕೊಂಡಿದ್ದು,380 ಜನರು ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಒಂದೇ ದಿನದಲ್ಲಿ 84,825 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 11,17,531ಕ್ಕೆ ಏರಿಕೆಯಾಗಿದೆ.
ಓದಿ: ಅಪರಾಧ ಕಾನೂನು ವ್ಯವಸ್ಥೆಯಲ್ಲಿ ಬದಲಾವಣೆ: ಸಲಹೆ ನೀಡುವಂತೆ ಸಂಸದರಿಗೆ ಪತ್ರ ಬರೆದ ಅಮಿತ್ ಶಾ
ದಿನವೊಂದಕ್ಕೆ ಶೇಕಡಾ 11.05ರಷ್ಟು ಮಂದಿಗೆ ಕೋವಿಡ್ ಸೋಂಕು ಕಾಣಿಸಿಕೊಳ್ಳುತ್ತಿದ್ದು, 380 ಜನರು ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಾವಿನ ಸಂಖ್ಯೆ 4 ಲಕ್ಷ 25 ಸಾವಿರ 035 ಕ್ಕೆ ಏರಿಕೆ ಆಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಹಿಂದಿನ ದಿನಕ್ಕೆ ಹೋಲಿಸಿದರೆ ಸೋಂಕಿನ ಪ್ರಮಾಣ ಶೇಕಡಾ 27ರಷ್ಟು ಹೆಚ್ಚಾಗಿದೆ. ಅಂದ ಹಾಗೆ ಬುಧವಾರ ದೇಶದಲ್ಲಿ 1.94 ಲಕ್ಷ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಸದ್ಯ ದೇಶದಲ್ಲಿ ಒಮಿಕ್ರಾನ್ ಪೀಡಿತರ ಸಂಖ್ಯೆ 5,488ಕ್ಕೆ ಏರಿಕೆ ಕಂಡಿದೆ.