ನವದೆಹಲಿ :ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಕಾರಣದಿಂದ ಏಪ್ರಿಲ್ 1ರಿಂದ 45 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ನಾಗರಿಕರಿಗೆ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಏ.1ರಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ : ಪ್ರಕಾಶ್ ಜಾವ್ಡೇಕರ್ - ಕೊರೊನಾ ಲಸಿಕೆ ಅಪ್ಡೇಟ್
15:15 March 23
45 ವರ್ಷ ಮೇಲ್ಪಟ್ಟ ಎಲ್ಲರೂ ಕೊರೊನಾ ವ್ಯಾಕ್ಸಿನೇಷನ್ಗಾಗಿ ನೋಂದಾಯಿಸಿಕೊಳ್ಳಬೇಕೆಂದು ಮನವಿ..
ಈ ಕುರಿತು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಮಾಹಿತಿ ನೀಡಿದ್ದಾರೆ. 45 ವರ್ಷ ಮೇಲ್ಪಟ್ಟ ಎಲ್ಲರೂ ಕೊರೊನಾ ವ್ಯಾಕ್ಸಿನೇಷನ್ಗಾಗಿ ನೋಂದಾಯಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ಪ್ರಸ್ತುತ ಕೇವಲ 60 ವರ್ಷ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಇತರ ಕಾಯಿಲೆಗಳಿಂದ ನರಳುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ಪಡೆಯಲು ಅವಕಾಶವಿದೆ.
ಕೊರೊನಾ ವೈರಸ್ ಟಾಸ್ಕ್‌ಫೋರ್ಸ್ ಮತ್ತು ತಜ್ಞರ ಸಲಹೆಯ ಆಧಾರದ ಮೇಲೆ ಈ ನಿರ್ಧಾರವನ್ನು ಕೇಂದ್ರ ಕ್ಯಾಬಿನೆಟ್ ತೆಗೆದುಕೊಂಡಿದೆ ಎಂದು ಜಾವ್ಡೇಕರ್ ಹೇಳಿದ್ದಾರೆ. ಈವರೆಗೆ 4.85 ಕೋಟಿ ಮಂದಿ ಒಂದು ಡೋಸ್ ಪಡೆದಿದ್ದು, 80 ಲಕ್ಷ ಮಂದಿ ಕೊರೊನಾ ವ್ಯಾಕ್ಸಿನ್ನ 2ನೇ ಡೋಸ್ ಪಡೆದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.