ಅಹಮದಾಬಾದ್ (ಗುಜರಾತ್): ದೆಹಲಿ, ಪಂಜಾಬ್ನಲ್ಲಿ ಅಧಿಕಾರ ಗದ್ದುಗೆ ಹಿಡಿರುವ ಆಮ್ ಆದ್ಮಿ ಪಕ್ಷವು ಈಗ ಗುಜರಾತ್ನ ಮೇಲೂ ಕಣ್ಣಿಟ್ಟಿದೆ. ಎರಡೂವರೆ ದಶಕಗಳಿಂದಲೂ ಬಿಜೆಪಿ ಆಡಳಿತ ನಡೆಸುತ್ತಿರುವ ಗುಜರಾತ್ನಲ್ಲಿ ಕಮಾಲ್ ಮಾಡುವ ಹುಮಸ್ಸಿನಲ್ಲಿದೆ. ಇದೇ ಹುಮ್ಮಸ್ಸಿನಲ್ಲಿ ಇಂದು ಪಕ್ಷದ ರಾಷ್ಟ್ರೀಯ ಸಂಚಾಲಕರಾದ ಅರವಿಂದ್ ಕೇಜ್ರಿವಾಲ್ ಗುಜರಾತ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಇಸುದನ್ ಗಧ್ವಿ ಅವರನ್ನು ಘೋಷಿಸಿದ್ದಾರೆ.
ಗುಜರಾತ್ನಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ರೇಸ್‌ನಲ್ಲಿ ಪ್ರಮುಖ ಮೂವರು ಇದ್ದರು. ಗುಜರಾತ್ ರಾಜ್ಯ ಘಟಕದ ಅಧ್ಯಕ್ಷ ಗೋಪಾಲ್ ಇಟಾಲಿಯಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಸುದನ್ ಗಧ್ವಿ ಮತ್ತು ಪ್ರಧಾನ ಕಾರ್ಯದರ್ಶಿ ಮನೋಜ್ ಸೊರತಿಹ್ಯ ಹೆಸರು ಮುಂಚೂಣಿಯಲ್ಲಿದ್ದವು. ಇದರಲ್ಲಿ ಕೊನೆಗೆ ಇಸುದನ್ ಗಧ್ವಿ ಅವರನ್ನು ಪಕ್ಷದ ಸಿಎಂ ಅಭ್ಯರ್ಥಿ ಎಂದು ಕೇಜ್ರಿವಾಲ್ ಪ್ರಕಟಿಸಿದ್ದಾರೆ.