ನವದೆಹಲಿ: ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿವೆ. ಈ ಕಾರಣಕ್ಕಾಗಿ ಪ್ರತಿದಿನ ತೈಲ ಬೆಲೆಯಲ್ಲಿ ಆಗುವ ಬದಲಾವಣೆಗಳನ್ನು ಗಮನಿಸುವ ಅನಿವಾರ್ಯತೆ ಪ್ರತಿಯೊಬ್ಬರಿಗೂ ಇರುತ್ತದೆ.
ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ವಾರದ ಮಂಗಳವಾರದಿಂದ ಬೆಲೆಗಳು ಸ್ಥಿರವಾಗಿದೆ. 24 ಆಗಸ್ಟ್ 2021ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕೊನೆಯ ಬದಲಾವಣೆ ಕಂಡುಬಂದಿದೆ.