ನವದೆಹಲಿ/ಬೆಂಗಳೂರು:ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದು ಮುಂಬೈ ಮಹಾನಗರದಲ್ಲಿ ಪ್ರತಿ ಲೀಟರ್ ಬೆಲೆ 105.58 ರೂಪಾಯಿಗೆ ಬಂದು ನಿಂತಿದೆ. ಡೀಸೆಲ್ ಬೆಲೆ 96.91 ರೂ. ಆಗಿದೆ.
ಭಾನುವಾರ ದೇಶಾದ್ಯಂತ ಪೆಟ್ರೋಲ್ ಬೆಲೆಯಲ್ಲಿ ಏರಿಕೆ ಕಂಡಿದ್ದು, ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 99.51 ಮತ್ತು ಡೀಸೆಲ್ ಬೆಲೆ 89.36 ರೂ. ಆಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 99.45 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ ಲೀಟರ್ ಪೆಟ್ರೋಲ್ ದರ 92.27 ರೂಪಾಯಿಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 100.44 ರೂಪಾಯಿಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ 93.91 ಆಗಿದೆ.