ಕರ್ನಾಟಕ

karnataka

ETV Bharat / bharat

ಸತತ 7ನೇ ದಿನವೂ ತೈಲ ಬೆಲೆ ಏರಿಕೆ: ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ - Fuel rate

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ದೇಶಾದ್ಯಂತ ಮತ್ತೆ ಏರಿಕೆ ಕಂಡಿದೆ. ಬೆಂಗಳೂರು, ಮುಂಬೈ, ಚೆನ್ನೈ ಸೇರಿದಂತೆ ಪ್ರಮುಖ ನಗರಗಳಲ್ಲಿ ತೈಲ ದರ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ..

Fuel price
Fuel price

By

Published : Nov 2, 2021, 10:46 AM IST

ನವದೆಹಲಿ: ದೇಶಾದ್ಯಂತ ಸತತ 7ನೇ ದಿನವೂ ಸಹ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ. ಇಂದೂ ಸಹ ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್​​ ಹಾಗೂ ಡೀಸೆಲ್​ ಮೇಲೆ 35 ಪೈಸೆ ಹೆಚ್ಚಿಸಿವೆ.

ಕಳೆದ ಕೆಲ ದಿನಗಳಿಂದ ತೈಲ ಬೆಲೆ ಏರಿಕೆ ಎಗ್ಗಿಲ್ಲದೆ ಹೆಚ್ಚಳವಾಗುತ್ತಿದೆ. 35 ಪೈಸೆ ಏರಿಕೆಯೊಂದಿಗೆ ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 110.04 ರೂಪಾಯಿ ಹಾಗೂ ಡೀಸೆಲ್​ ದರ 98.42 ರೂಪಾಯಿ ಇದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 115.85 ಕ್ಕೆ ಹಾಗೂ ಲೀಟರ್ ಡೀಸೆಲ್ 106.62 ರೂ. ಗೆ ಮಾರಾಟವಾಗುತ್ತಿದೆ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ110.49 ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 101.56 ರೂ. ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್​ಗೆ ಪೆಟ್ರೋಲ್​ಗೆ 106.66 ರೂ. ಇದ್ದು, ಲೀಟರ್ ಡೀಸೆಲ್ 102.59 ಕ್ಕೆ ಲಭ್ಯವಿದೆ.

ಪ್ರಮುಖ ನಗರಗಳಲ್ಲಿರುವ ತೈಲ ದರದ ಮಾಹಿತಿ

ಬೆಂಗಳೂರಿನ ಇಂಧನ ಬೆಲೆ:

ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 113.93 ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 104.05 ರೂ. ಗೆ ಏರಿಕೆಯಾಗಿದೆ. ಗಾಂಧಿನಗರದಲ್ಲಿ ಲೀಟರ್‌ ಪೆಟ್ರೋಲ್​ ಬೆಲೆ 106.94 ರೂ. ಇದೆ. ಹಾಗೆಯೇ ಪ್ರತಿ ಲೀಟರ್‌ ಡೀಸೆಲ್ 106.39 ರೂ.ಗಳಿಗೆ ದೊರೆಯುತ್ತಿದೆ. ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಸೇರಿದಂತೆ ತೈಲ ಕಂಪನಿಗಳು ಅಬಕಾರಿ ಸುಂಕಗಳ ಆಧಾರದ ಮೇಲೆ ಇಂಧನ ದರವನ್ನು ಹೆಚ್ಚಿಸುತ್ತಿರುತ್ತವೆ.

ABOUT THE AUTHOR

...view details