ಜಲ್ನಾ (ಮಹಾರಾಷ್ಟ್ರ):ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ಭಾರಿ ಅವಘಡ ಸಂಭವಿಸಿದ್ದು, ಸ್ಟೀಲ್ ಕಾರ್ಖಾನೆಯೊಂದರಲ್ಲಿ ಕುಲುಮೆ ಸ್ಫೋಟಗೊಂಡಿದೆ. ಇದರಿಂದ ಇಬ್ಬರು ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಜೊತೆಗೆ ಇತರ ಆರು ಜನರು ಗಾಯಗೊಂಡಿದ್ದಾರೆ.
ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿರುವ ಗೀತೈ ಸ್ಟೀಲ್ ಕಾರ್ಖಾನೆಯಲ್ಲಿ ಈ ದುರ್ಘಟನೆ ಜರುಗಿದೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, ಹಲವು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದೆ. ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.