ಬಾಲಿ (ಇಂಡೋನೇಷ್ಯಾ): ಇಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಹಿನ್ನೆಲೆಯಲ್ಲಿ ಮಂಗಳವಾರ ಯುಕೆ ಪ್ರಧಾನಿ ರಿಷಿ ಸುನಕ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮೊದಲ ಅನೌಪಚಾರಿಕ ಸಂವಾದ ನಡೆಸಿದರು. ಇಬ್ಬರೂ ನಾಯಕರು ಹಲವಾರು ವಿಷಯಗಳ ಕುರಿತು ಅಭಿಪ್ರಾಯ ವಿನಿಮಯ ಮಾಡಿಕೊಂಡರು. ರಿಷಿ ಸುನಕ್ ಕಳೆದ ತಿಂಗಳು ಯುಕೆ ಪ್ರಧಾನಿಯಾದ ನಂತರ ಇದು ಪ್ರಧಾನಿ ಮೋದಿ ಅವರೊಂದಿಗೆ ಪ್ರಥಮ ಭೇಟಿಯಾಗಿದೆ.
ಭಾರತವು ಡಿಸೆಂಬರ್ 1, 2022 ರಿಂದ ಒಂದು ವರ್ಷ ಕಾಲ ಜಿ20 ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲಿದೆ. ಜಿ20 ಶೃಂಗವು ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್, ದಕ್ಷಿಣ ಕೊರಿಯಾ, ಮೆಕ್ಸಿಕೋ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿ, ಯುಕೆ, ಅಮೆರಿಕ ಮತ್ತು ಯುರೋಪಿಯನ್ ಯೂನಿಯನ್ ಹೀಗೆ 19 ದೇಶಗಳನ್ನು ಒಳಗೊಂಡಿದೆ.