ಶ್ರೀನಗರ, ಜಮ್ಮು ಕಾಶ್ಮೀರ:ಗಾಲ್ವಾನ್ ಕಣಿವೆಯಲ್ಲಿ ಭಾರತದ ವೀರ ಯೋಧರು ಹುತಾತ್ಮರಾಗಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ಹುತಾತ್ಮರಿಗೆ ಭಾರತೀಯ ಸೇನೆ ಮಂಗಳವಾರ ಗೌರವ ಸಲ್ಲಿಸಿದೆ.
ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಾಣೆ ಮತ್ತು ಹಲವು ಸೇನಾ ಪಡೆಗಳ ಉನ್ನತಾಧಿಕಾರಿಗಳು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ದೇಶದ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವಕ್ಕಾಗಿ ಪ್ರಾಣ ತ್ಯಾಗ ಮಾಡಿದ ಯೋಧರ ಶೌರ್ಯವನ್ನು ರಾಷ್ಟ್ರದ ಸ್ಮಾರಕದಲ್ಲಿ ಶಾಶ್ವತವಾಗಿ ಕೆತ್ತಲಾಗುವುದು ಎಂದು ಭಾರತೀಯ ಸೇನೆ ಘೋಷಿಸಿದೆ.
ಇದರ ಜೊತೆಗೆ ಅತ್ಯಂತ ಕಷ್ಟಕರವಾದ ಸನ್ನಿವೇಶದಲ್ಲಿ ದೇಶಕ್ಕಾಗಿ ಹೋರಾಡಿ, ಪ್ರಾಣ ತ್ಯಾಗ ಮಾಡಿದ ಈ ಧೀರ ಯೋಧರಿಗೆ ರಾಷ್ಟ್ರವು ಶಾಶ್ವತವಾಗಿ ಕೃತಜ್ಞರಾಗಿರಬೇಕು ಎಂದು ಭಾರತೀಯ ಸೇನೆ ಹೇಳಿದೆ.