ಕರ್ನಾಟಕ

karnataka

ETV Bharat / bharat

ಮಾರಾಟಕ್ಕಿಟ್ಟ 150 ಗಣೇಶ ಮೂರ್ತಿಗಳಿಗೆ ಹಾನಿ: ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲು

ಛತ್ತೀಸ್​ಗಢದ ಆಜಾದ್ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಅಮಪಾರ ಪ್ರದೇಶದಲ್ಲಿ ಮಾರಾಟಕ್ಕಿಟ್ಟಿದ್ದ ಗಣೇಶ ಮೂರ್ತಿಗಳನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ.

Ganesh idols for sale vandalised in Raipur
ಗಣೇಶ ಮೂರ್ತಿಗಳ ಧ್ವಂಸ

By

Published : Aug 30, 2022, 4:16 PM IST

ರಾಯ್‌ಪುರ:ಗಣೇಶ ಚತುರ್ಥಿ ಹಬ್ಬಕ್ಕಾಗಿ ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಮಾರಾಟಕ್ಕೆ ಇಡಲಾಗಿದ್ದ ಸುಮಾರು 150 ಗಣೇಶ ಮೂರ್ತಿಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದರು. ಸೋಮವಾರ ನಸುಕಿನ ಜಾವ ಆಜಾದ್ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮಪಾರಾ ಪ್ರದೇಶದಲ್ಲಿ ಘಟನೆ ನಡೆದಿದೆ.

ರಸ್ತೆಬದಿಯಲ್ಲಿ ಮೂರರಿಂದ ನಾಲ್ಕು ಅಂಗಡಿಗಳಲ್ಲಿ ಇರಿಸಲಾಗಿದ್ದ ಗಣೇಶ ಮೂರ್ತಿಗಳು ಹಾನಿಗೀಡಾಗಿವೆ ಎಂದು ಅವರು ಮಾಹಿತಿ ನೀಡಿದರು. ಅಂಗಡಿ ಮಾಲೀಕರ ದೂರಿನ ಮೇರೆಗೆ ಪೊಲೀಸರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ತನಿಖಾಧಿಕಾರಿಗಳು ಈ ಮಳಿಗೆಗಳ ಬಳಿ ಅಳವಡಿಸಲಾಗಿರುವ ಸಿಸಿಟಿವಿಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಲ್ಲಿ ಗಣೇಶೋತ್ಸವದ ಅನುಮತಿಗೆ 63 ಏಕಗವಾಕ್ಷಿ ಕೇಂದ್ರ.. ಪಿಒಪಿ ಗಣೇಶ ಮೂರ್ತಿ ತಯಾರಿಕೆ ನಿಷೇಧ

ಘಟನೆಯಲ್ಲಿ ಸ್ಟಾಲ್ ಮಾಲೀಕರು ಸುಮಾರು 2 ಲಕ್ಷ ರೂಪಾಯಿ ನಷ್ಟ ಅನುಭವಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.

ABOUT THE AUTHOR

...view details