ಕಾನ್ಪುರ್(ಉತ್ತರ ಪ್ರದೇಶ):ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದಲ್ಲಿ ಇದೀಗ ಮತ್ತೊಂದು ಅಮಾನವೀಯ ಘಟನೆ ನಡೆದಿರುವುದು ಬೆಳಕಿಗೆ ಬಂದಿದ್ದು, ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿಯ ತಂದೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
13 ವರ್ಷದ ಬಲಕಿಯೋರ್ವಳು ಮೂವರು ಕಾಮುಕರಿಂದ ಅತ್ಯಾಚಾರಕ್ಕೊಳಗಾಗಿದ್ದಳು. ಕಾನ್ಪುರ್ದಲ್ಲಿ ಈ ಘಟನೆ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ನಿನ್ನೆ ಪ್ರಕರಣ ದಾಖಲು ಮಾಡಿದ್ದ ಬಾಲಕಿ, ಇಂದು ತನ್ನ ತಂದೆಯೊಂದಿಗೆ ವೈದ್ಯಕೀಯ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದಳು.
ಇದನ್ನೂ ಓದಿ: ನಂದಿಗ್ರಾಮದಲ್ಲಿ ಗೆಲ್ಲಿಸುವಂತೆ ಶಿವನ ಮೊರೆ ಹೋದ ಸಿಎಂ ಮಮತಾ: ವಿಡಿಯೋ
ಅಲ್ಲಿಂದ ವಾಪಸ್ ಬರುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಅತ್ಯಾಚಾರವೆಸಗಿದ್ದ ಮೂವರ ಪೈಕಿ ಇಬ್ಬರಾದ ದೀಪು ಯಾದವ್ ಹಾಗೂ ಸೌರಭ್ ಯಾದವ್ ತಂದೆ ಕನೌಜ್ನಲ್ಲಿ ಸಬ್ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ ಎನ್ನಲಾಗಿದೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸುವ ಉದ್ದೇಶದಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತು. ಈ ವೇಳೆ ಟೀ ಸೇವನೆ ಮಾಡಬೇಕು ಎಂಬ ಉದ್ದೇಶದಿಂದ ಬಾಲಕಿ ತಂದೆ ಹೊರಗಡೆ ಬಂದಿದ್ದಾರೆ. ಈ ವೇಳೆ ಅವರ ಮೇಲೆ ಟ್ರಕ್ ಹರಿದಿದೆ. ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇನ್ನು ಘಟನೆ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ ಎಂಬ ಗಂಭೀರ ಆರೋಪ ಕೇಳಿ ಬಂದಿದ್ದು, ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಕಾಮುಕರ ಕಡೆಯವರು ಅಪಘಾತ ಮಾಡಿಸಿರಬಹುದು ಎನ್ನಲಾಗಿದೆ.