ಮಥುರಾ(ಉತ್ತರಪ್ರದೇಶ):ಉತ್ತರಪ್ರದೇಶದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆಗೆ ಮತ್ತು ಬರುವ ಪಾನೀಯ ಕುಡಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೇ, ಆಕೆಯ ಕಾಲಿನ ಮೇಲೆ ಬೈಕ್ ಹತ್ತಿಸಿ, ಕಾಲನ್ನೇ ತುಂಡರಿಸಿದ ಕ್ರೂರ ಘಟನೆ ನಡೆದಿದೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಮಥುರಾ ಜಿಲ್ಲೆಯ ಖರೋಟ್ ಎಂಬ ಗ್ರಾಮದಲ್ಲಿ ಮೇ 24 ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ. 30 ವರ್ಷದ ಮಹಿಳೆಯೊಬ್ಬರು ಬ್ಯಾಂಕ್ನಿಂದ ಹಣ ಬಿಡಿಸಿಕೊಂಡು ಬಸ್ಗಾಗಿ ಕಾಯುತ್ತಿದ್ದಾಗ ಪರಿಚಯದ ಯುವಕನೊಬ್ಬ ಬೈಕ್ ಮೇಲೆ ಬಂದಿದ್ದಾನೆ. ಈ ವೇಳೆ, ಆಕೆಯನ್ನು ಮನೆಗೆ ಡ್ರಾಪ್ ಮಾಡುವುದಾಗಿ ತಿಳಿಸಿ ಬೈಕ್ ಹತ್ತಿಸಿಕೊಂಡಿದ್ದಾನೆ.
ಮಾರ್ಗ ಮಧ್ಯೆ ಆತ ತನ್ನ ಗೆಳೆಯನನ್ನೂ ಬೈಕ್ ಮೇಲೆ ಹತ್ತಿಸಿಕೊಂಡಿದ್ದಾನೆ. ಈ ವೇಳೆ, ಮಹಿಳೆಗೆ ಮತ್ತು ಬರುವ ಪಾನೀಯ ಕುಡಿಸಿದ್ದಾರೆ. ಮಹಿಳೆ ಪ್ರಜ್ಞೆ ತಪ್ಪಿದ ಬಳಿಕ ಗೆಳೆಯರನ್ನು ಕರೆಯಿಸಿದ ಆರೋಪಿಗಳು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.