ಕರ್ನಾಟಕ

karnataka

ETV Bharat / bharat

ಶಾಪಿಂಗ್‌ ಮುಗಿಸಿ ಮನೆಗೆ ಮರಳುತ್ತಿದ್ದ ಸಹೋದರಿಯರ ಅಪಹರಿಸಿ ಸಾಮೂಹಿಕ ಅತ್ಯಾಚಾರ - ಅಯೋಧ್ಯೆಯಲ್ಲಿ ಸಹೋದರಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಇಬ್ಬರು ಸಹೋದರಿಯರ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

Etv Bharat
Etv Bharat

By

Published : Aug 10, 2022, 4:30 PM IST

ಅಯೋಧ್ಯೆ(ಉತ್ತರ ಪ್ರದೇಶ):ಶಾಪಿಂಗ್‌ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಇಬ್ಬರು ಸಹೋದರಿಯರನ್ನು ಅಪಹರಿಸಿದ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಅಯೋಧ್ಯೆಯ ಗ್ರಾಮಾಂತರ ಪ್ರದೇಶ ಬಿಕಾಪುರ್ ಕೊತ್ವಾಲಿ ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರಿಯರ ತಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಯುವತಿಯರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದಾರೆ. ಆರೋಪಿಗಳಿಗೆ ಪೊಲೀಸರಿಂದ ಶೋಧ ನಡೆಯುತ್ತಿದೆ.

ಸಾಮೂಹಿಕ ಅತ್ಯಾಚಾರವೆಸಗಿರುವ ದುಷ್ಕರ್ಮಿಗಳು ಕೊಲೆ ಬೆದರಿಕೆ ಕೂಡಾ ಹಾಕಿದ್ದಾರೆ. ಸಂತ್ರಸ್ತೆಯರು ಬುಡಕಟ್ಟು ಜನಾಂಗಕ್ಕೆ ಸೇರಿದವರೆಂದು ತಿಳಿದು ಬಂದಿದೆ. ಇಬ್ಬರು ಸೋಮವಾರ ಸಂಜೆ ಶೇರ್ಪುರ್​ ಪ್ಯಾರಾ ಬಜಾರ್​ಗೆ ತೆರಳಿದ್ದು, ವಾಪಸ್ ಮನೆಗೆ ಬರುತ್ತಿದ್ದಾಗ ನಾಲ್ವರು ಯುವಕರು ಇವರಿಗೆ ತಡೆಯೊಡ್ಡಿ ದುಷ್ಕೃತ್ಯ ಎಸಗಿದ್ದಾರೆ.

ಇದನ್ನೂ ಓದಿ:ಪ್ರೀತಿಸಲು ನಿರಾಕರಿಸಿದ ಕಾಲೇಜು ವಿದ್ಯಾರ್ಥಿನಿಗೆ ಚಾಕುವಿನಿಂದ ಹಲ್ಲೆ ನಡೆಸಿದ ಕಿರಾತಕ

ಬಹಳ ಹೊತ್ತಾದರೂ ಯುವತಿಯರು ಮನೆಗೆ ಬಾರದ ಕಾರಣ ಪೋಷಕರು ಹುಡುಕಾಟ ಆರಂಭಿಸಿದ್ದರು. ಆ ಬಳಿಕ ಊರ ಹೊರಗಡೆ ಕಾಣಿಸಿಕೊಂಡಿದ್ದು, ವಿಚಾರಣೆ ನಡೆಸಿದಾಗ ಅವರು ಘಟನೆಯನ್ನು ವಿವರಿಸಿದ್ದಾರೆ.

ABOUT THE AUTHOR

...view details