ಮುಂಬೈ:ಕೊಲೆ, ದರೋಡೆ, ಪ್ರಾಣ ಬೆದರಿಕೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಭೂಗತ ಪಾತಕಿ ರವಿ ಪೂಜಾರಿಗೆ ಇದೀಗ ಮಾರ್ಚ್ 9ರವರೆಗೆ ಮುಂಬೈ ಪೊಲೀಸರ ವಶಕ್ಕೆ ನೀಡಲಾಗಿದ್ದು, ಮುಂಬೈ ಕೋರ್ಟ್ ಈ ಆದೇಶ ಹೊರಹಾಕಿದೆ.
2019ರ ಫೆಬ್ರವರಿ ತಿಂಗಳಲ್ಲಿ ದಕ್ಷಿಣ ಆಫ್ರಿಕಾದ ಸೆನೆಗಲ್ನಲ್ಲಿ ಭೂಗತ ಪಾತಕಿ ರವಿ ಪೂಜಾರಿ ಬಂಧನ ಮಾಡಲಾಗಿತ್ತು. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಇತನ ಮೇಲಿಂದ ಕಾರಣ ಮುಂಬೈ ಪೊಲೀಸರು ಹೆಚ್ಚಿನ ವಿಚಾರಣೆಗೆ ತಮ್ಮ ವಶಕ್ಕೆ ನೀಡುವಂತೆ ಬೆಂಗಳೂರು ಪೊಲೀಸರ ಬಳಿ ಮನವಿ ಮಾಡಿದ್ದರು. ಇದೀಗ ಬಾಡಿ ವಾರೆಂಟ್ ಮೇಲೆ ಆತನನ್ನು ಮುಂಬೈ ಪೊಲೀಸರಿಗೆ ಹಸ್ತಾಂತರ ಮಾಡಲಾಗಿದೆ.