ಮುಂಬೈ:ಕರ್ನಾಟಕ ಮತ್ತು ಮುಂಬೈನಲ್ಲಿ ನಡೆದ ಹಲವಾರು ಸುಲಿಗೆ ಪ್ರಕರಣಗಳಲ್ಲಿ ಬೇಕಾಗಿದ್ದ ಗ್ಯಾಂಗ್ಸ್ಟರ್ ಸುರೇಶ್ ಪೂಜಾರಿಯನ್ನು ಫಿಲಿಪೈನ್ಸ್ನಿಂದ ಭಾರತಕ್ಕೆ ಗಡಿಪಾರು ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಮುಂಬೈ ಬಳಿಯ ಥಾಣೆ, ಕಲ್ಯಾಣ್, ಉಲ್ಲಾಸನಗರ ಮತ್ತು ಡೊಂಬಿವಿಲಿಯಲ್ಲಿ ನಡೆದ ಸುಲಿಗೆ ಪ್ರಕರಣಗಳಲ್ಲಿ ಬೇಕಾಗಿದ್ದ ಸುರೇಶ್ ಪೂಜಾರಿಯನ್ನು ಮಂಗಳವಾರ ತಡರಾತ್ರಿ ಭಾರತಕ್ಕೆ ಕರೆತರಲಾಗಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಸುರೇಶ್ ಪೂಜಾರಿ ಬಂದಿಳಿದ ನಂತರ ಐಬಿ ಮತ್ತು ಸಿಬಿಐ ಅಧಿಕಾರಿಗಳು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಐಬಿ ಮತ್ತು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ ನಂತರ ಆತನನ್ನು ಮುಂಬೈ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸುರೇಶ್ ಪೂಜಾರಿಯನ್ನು ತಮ್ಮ ಕಸ್ಟಡಿಗೆ ತೆಗೆದುಕೊಳ್ಳಲು ಈಗಾಗಲೇ ಮುಂಬೈ ಅಪರಾಧ ವಿಭಾಗದ ತಂಡವೊಂದು ದೆಹಲಿಗೆ ತೆರಳಿದೆ.