ಖಮ್ಮಂ (ತೆಲಂಗಾಣ):ಬಿಆರ್ಎಸ್ ಪಾರ್ಟಿ ಆಯೋಜಿಸಿದ್ದ ಆತ್ಮೀಯ ಸಮ್ಮೇಳನ ಕಾರ್ಯಕ್ರಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 2 ಜನ ಸಾವು, 8 ಜನ ಗಾಯಗೊಂಡಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಮ್ಮಲಪಾಡು ಗ್ರಾಮದಲ್ಲಿ ನಡೆದಿದೆ. ಕಾರ್ಯಕ್ರಮಕ್ಕೆ ಮುಖಂಡರ ಆಗಮನದ ವೇಳೆ ಸಿಡಿಸಿದ ಪಟಾಕಿಯಿಂದ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡು ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ.
ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಖಮ್ಮಂ ಜಿಲ್ಲೆಯ ಕಾರೇಪಲ್ಲಿಯ ಚಿಮ್ಮಲಪಾಡು ಗ್ರಾಮದಲ್ಲಿ ಭಾರತೀಯ ರಾಷ್ಟ್ರೀಯ ಪಾರ್ಟಿ (ಬಿಆರ್ಎಸ್) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಆತ್ಮೀಯ ಸಮ್ಮೇಳನ ಕಾರ್ಯಕ್ರಮದಲ್ಲಿ ಸಂಸದ ನಾಮ ನಾಗೇಶ್ವರ್ ರಾವ್ ಮತ್ತು ಶಾಸಕ ರಾಮುಲು ನಾಯ್ಕ್ ಭಾಗವಹಿಸಿದ್ದರು, ಮುಖಂಡರು ಕಾರ್ಯಕ್ರಮಕ್ಕೆ ಆಗಮಿಸುವ ವೇಳೆ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿದ್ದಾರೆ, ಪಟಾಕಿ ಕಿಡಿಗಳು ಪಕ್ಕದಲ್ಲೇ ಇದ್ದ ಗುಡಿಸಲಿಗೆ ಬಿದ್ದು ಬೆಂಕಿ ಹೊತ್ತಿಕೊಂಡಿದ್ದು. ಬೆಂಕಿಯನ್ನು ನಿಯಂತ್ರಿಸಲು ಸ್ಥಳೀಯರು ಪ್ರಯತ್ನ ಪಟ್ಟರಾದರೂ, ಬೆಂಕಿಯನ್ನು ನಂದಿಸಲು ಸಾಧ್ಯವಾಗಲಿಲ್ಲ. ಜತೆಗೆ ಗುಡಿಸಲಿನಲ್ಲಿದ್ದ ಗ್ಯಾಸ್ ಸಿಲಿಂಡರ್ ಬಗ್ಗೆ ಯಾರ ಗಮನಕ್ಕೂ ಬಂದಿರಲಿಲ್ಲ ಎಂದು ತಿಳಿಸಿದ್ದಾರೆ.
ಏಕಾಏಕಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ, ಸ್ಥಳದಲ್ಲಿದ್ದ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ, ತಕ್ಷಣವೇ ಗಾಯಳುಗಳನ್ನು ಪೊಲೀಸ್ ವಾಹನದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮಾರ್ಗಮಧ್ಯೆದಲ್ಲೇ ಮೃತ ಪಟ್ಟರೆ, ಇನ್ನೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತ ಪಟ್ಟಿದ್ದಾರೆ. ಈ ಘಟನೆಯಿಂದ ಸಂಸದರು ಮತ್ತು ಶಾಸಕರು ಸಭೆ ರದ್ದುಪಡಿಸಿ ಸ್ಥಳದಿಂದ ತೆರಳಿದರು.
ಇದನ್ನೂ ಓದಿ:15ನೇ ವಯಸ್ಸಿಗೆ ಪದವಿ ಪಡೆಯಲು ಹೊರಟಿರುವ ಬಾಲಕಿ: ಪ್ರಧಾನಿ ಭೇಟಿಯಾಗಿ ಹೇಳಿದ್ದೇನು ಗೊತ್ತಾ?