ಮುಂಬೈ: ಇಲ್ಲಿನ ಕಸ್ತೂರಿ ಬಾ ಆಸ್ಪತ್ರೆಯಲ್ಲಿ ಎಲ್ಪಿಜಿ ಸೋರಿಕೆಯಾಗಿದ್ದು, ಭಾರಿ ಅನಾಹುತ ತಪ್ಪಿದೆ. ಚಿಂಚ್ಪೋಕಲಿ ಪ್ರದೇಶದಲ್ಲಿರುವ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ ಆಡಳಿತಕ್ಕೊಳಪಟ್ಟಿರುವ ಆಸ್ಪತ್ರೆಯಲ್ಲಿ ಈ ದುರ್ಘಟನೆ ನಡೆದಿದೆ.
ದುರ್ಘಟನೆ ನಡೆದ ಸಂದರ್ಭದಲ್ಲಿ 28 ಕೋವಿಡ್ ಸೋಂಕಿತರು ಸೇರಿದಂತೆ ಒಟ್ಟು 58 ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ತಕ್ಷಣವೇ ಇವರನ್ನ ಬೇರೆ ಕಡೆ ಸ್ಥಳಾಂತರ ಮಾಡಲಾಗಿದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ಮಾಹಿತಿ ನೀಡಿದೆ. ಇಂದು ಬೆಳಗ್ಗೆ 11:30ರ ವೇಳೆ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪನಿ ಅಧಿಕಾರಿಗಳು ಭೇಟಿ ನೀಡಿದ್ದರು.