ಅಲಿಗಢ(ಉತ್ತರ ಪ್ರದೇಶ):ಮಾಂಸದ ಕಾರ್ಖಾನೆಯಲ್ಲಿ ಗ್ಯಾಸ್ ಸೋರಿಕೆ ಉಂಟಾಗಿ 50 ಜನರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥಗೊಂಡವರನ್ನು ಇಲ್ಲಿನ ಜೈನ್ ಮೆಡಿಕಲ್ ಕಾಲೇಜಿಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅಲಿಘರ್‌ನ ರೋರಾವರ್ ಪೊಲೀಸ್ ಠಾಣೆ ವ್ಯಾಪ್ತಿಯ ಅಲ್ ದುವಾ ಮಾಂಸ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಿಂದ ಅವಘಡ ಸಂಭವಿಸಿದೆ.
ಕಾರ್ಖಾನೆಯಲ್ಲಿ ಪ್ಯಾಕೇಜಿಂಗ್ ಕೆಲಸ ಮಾಡುತ್ತಿರುವ ಸುಮಾರು 50 ಮಂದಿ ಅಸ್ವಸ್ಥರಾಗಿದ್ದಾರೆ. 'ಕಾರ್ಖಾನೆಯಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಇದರಿಂದ ಕೆಲ ಕಾರ್ಮಿಕರು ಉಸಿರಾಟದ ತೊಂದರೆ ಅನುಭವಿಸಿದ್ದಾರೆ. ಅಲ್ಲದೆ, ಕೆಲವರು ಮೂರ್ಛೆ ಹೋಗಿದ್ದರು. ಚಿಕಿತ್ಸೆಗಾಗಿ ಜೈನ್ ಮೆಡಿಕಲ್ ಕಾಲೇಜಿಗೆ ಚಿಕಿತ್ಸೆಗಾಗಿ ಕರೆತರಲಾಗಿದೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಅಲಿಘರ್ ಡಿಎಂ ಇಂದರ್ ವಿಕ್ರಮ್ ಸಿಂಗ್ ಹೇಳಿದ್ದಾರೆ.