ನವದೆಹಲಿ :ಪ್ರಗತಿಪರ ಚಿಂತಕಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಹಾಗೂ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನ ಜಾಮೀನು ಅರ್ಜಿಯನ್ನ ಯಾವುದೇ ಪ್ರಭಾವಕ್ಕೊಳಗಾಗದಂತೆ ನಿರ್ಧರಿಸಿ ಎಂದು ಸೂಚನೆ ನೀಡಿದೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯೋರ್ವನ ವಿರುದ್ಧ ದಾಖಲಾಗಿದ್ದ ಆರೋಪಗಳನ್ನ ರದ್ದುಗೊಳಿಸಿದ್ದ ಹೈಕೋರ್ಟ್ನ ಆದೇಶ ಪ್ರಶ್ನೆ ಮಾಡಿ ಗೌರಿ ಲಂಕೇಶ್ ಸೋದರಿ ಕವಿತಾ ಲಂಕೇಶ್ ಅವರು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಿದ್ದರು. ಇದರ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಇದೀಗ ಮಹತ್ವದ ನಿರ್ದೇಶನ ನೀಡಿದೆ.
ಗೌರಿ ಲಂಕೇಶ್ ಪ್ರಕರಣದ ಪ್ರಮುಖ ಆರೋಪಿ ಮೋಹನ್ ನಾಯಕ್ ಎಂಬಾತನ ವಿರುದ್ಧ ದಾಖಲಾಗಿದ್ದ ಕೆಲ ಪ್ರಕರಣಗಳನ್ನ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆಯಡಿ ಕೈಬಿಡಲಾಗಿತ್ತು. ಇದನ್ನ ಪ್ರಶ್ನೆ ಮಾಡಿ ಕವಿತಾ ಲಂಕೇಶ್ ಅವರು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡಿದ್ದರು.