ಹೈದರಾಬಾದ್:ಭಾರತದ ಜಿಡಿಪಿ ಬೆಳವಣಿಗೆಯ ದರ ಮೊದಲ ತ್ರೈಮಾಸಿಕದಲ್ಲಿ -23.9 ರಷ್ಟು ಇಳಿಕೆ ಕಂಡಿದ್ದ ಬಳಿಕ ಎರಡನೇ ತ್ರೈಮಾಸಿಕದಲ್ಲಿ ಪುಟಿದೇಳುವ ನಿರೀಕ್ಷೆ ಇದೆ ಎನ್ನಲಾಗಿದೆ. ಅಲ್ಲದೇ ಈ ನಡುವೆ ಬೆಳವಣಿಗೆಯ ದರ ಯಥಾಸ್ಥಿತಿಯಲ್ಲಿದ್ದರು ಖುಣಾತ್ಮಕ ದರ ಕಡಿಮೆಯಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರ ಈ ಸೆಪ್ಟೆಂಬರ್ನಲ್ಲಿ ಅಂತ್ಯಗೊಂಡಿರುವ 2ನೇ ತ್ರೈಮಾಸಿಕ ಜಿಡಿಪಿ ಬೆಳವಣಿಗೆ ದರದ ದತ್ತಾಂಶವನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದ್ದು, ಈ ತ್ರೈಮಾಸಿಕದಲ್ಲಿ ಆರ್ಥಿಕತೆಯೂ 8ರಿಂದ 11 ಪ್ರತಿಶತದಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೆಚ್ಡಿಎಫ್ಸಿ ಬ್ಯಾಂಕ್ನ ಆರ್ಥಿಕ ತಜ್ಞೆ ಸಾಕ್ಷಿ ಗುಪ್ತಾ ಈ ಕುರಿತು ಮಾತನಾಡಿ, 2021 ಹಣಕಾಸು ವರ್ಷದ 2ನೇ ತ್ರೈಮಾಸಿಕದ ಜಿಡಿಪಿ ಬೆಳವಣಿಗೆ ದರದ ದತ್ತಾಂಶ ಸದ್ಯದಲ್ಲೇ ಬಿಡುಗಡೆಯಾಗುವ ನಿರೀಕ್ಷೆ ಇದ್ದು, ಇಳಿಕೆಯ ಪ್ರಮಾಣದಲ್ಲಿ ಚೇತರಿಕೆ ಕಾಣಲಿದೆ ಎಂದಿದ್ದಾರೆ. ಅಲ್ಲದೇ ಡಿಸೆಂಬರ್ನಲ್ಲಿ ಬೆಳವಣಿಯ ದರವು ಸಕಾರಾತ್ಮಕವಾಗಿರಲಿದೆ ಎಂಬ ನಿರೀಕ್ಷೆ ಇದೆ. 3ನೇ ತ್ರೈಮಾಸಿಕದಲ್ಲಿ ಇನ್ನಷ್ಟು ಚೇತರಿಸಿಕೊಳ್ಳಲಿದ್ದು, ಬೆಳವಣಿಗೆಯ ದರ ಶೇ.1ರಷ್ಟು ಏರಿಕೆ ಕಾಣಲಿದೆ. ಮತ್ತು 4ನೇ ತ್ರೈಮಾಸಿಕದಲ್ಲಿ ಶೇ2.5ರಷ್ಟು ಬೆಳವಣಿಗೆ ಕಾಣುವ ನಿರೀಕ್ಷೆ ಇದೆ ಎಂದಿದ್ದಾರೆ.