ನವದೆಹಲಿ:ತಮಿಳುನಾಡಿನ ಕೂನೂರಿನಲ್ಲಿ ಎರಡು ದಿನಗಳ ಹಿಂದೆ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಅವರ ಅಂತ್ಯಕ್ರಿಯೆ ದೆಹಲಿ ಕಂಟೋನ್ಮೆಂಟ್‌ನ ಬ್ರಾರ್ ಸ್ಕ್ವೇರ್ ಚಿತಾಗಾರದಲ್ಲಿ ನಡೆಯಿತು. ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ದೇಶದ ಮೊದಲ ಮೂರು ರಕ್ಷಣಾ ಪಡೆಗಳ ಮುಖ್ಯಸ್ಥ(CDS) ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಪಂಚಭೂತಗಳಲ್ಲಿ ಲೀನರಾದರು.
ನಿನ್ನೆ ಸುಲೂರು ಏರ್ಬೇಸ್ನಿಂದ ದೆಹಲಿಯ ಪಾಲಂ ಏರ್ಬೇಸ್ಗೆ ಪಾರ್ಥಿವ ಶರೀರ ತೆಗೆದುಕೊಂಡು ಬರಲಾಗಿತ್ತು. ಈ ವೇಳೆ, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸೇನಾ ಮುಖ್ಯಸ್ಥ ನರಾವಣೆ ಸೇರಿದಂತೆ ಅನೇಕರು ಅಂತಿಮ ನಮನ ಸಲ್ಲಿಸಿದ್ದರು. ಇಂದು ಬೆಳಗ್ಗೆ ದೆಹಲಿಯ ರಾವತ್ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದಾದ ನಂತರ ಸಕಲ ಸೇನಾ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಸೇನಾ ಮುಖ್ಯಸ್ಥರ ಅಂತ್ಯಕ್ರಿಯೆಗೂ ಮುಂಚಿತವಾಗಿ ಪಾರ್ಥಿವ ಶರೀರದ ಅಂತಿಮ ಮೆರವಣಿಗೆ ನಡೆಸಲಾಯಿತು. ಈ ವೇಳೆ, 800 ಸೇವಾ ಸಿಬ್ಬಂದಿ ಪಾಲ್ಗೊಂಡಿದ್ದರು. ಅಗಲಿದ ಸೇನಾ ಮುಖ್ಯಸ್ಥರಿಗೆ 17 ಬಾರಿ ಗನ್ ಸೆಲ್ಯೂಟ್ ನೀಡಲಾಯಿತು.
ಪುತ್ರಿಯರಿಂದ ಅಂತಿಮ ವಿಧಿ-ವಿಧಾನ