ಗಾಜಿಯಾಬಾದ್:14 ವರ್ಷದ ಅಪ್ರಾಪ್ತೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ದುಷ್ಕೃತ್ಯದಲ್ಲಿ ಭಾಗಿಯಾಗಿರುವ ನಾಲ್ಕನೇ ಆರೋಪಿ ತಲೆ ಮರೆಸಿಕೊಂಡಿದ್ದಾನೆ.
14 ವರ್ಷದ ಬಾಲಕಿ ಮೇಲೆ ದೆಹಲಿಯ ಕೊಡ್ಲಿ ಪ್ರದೇಶದಲ್ಲಿ ಜುಲೈ 27ರ ರಾತ್ರಿ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಘಟನೆಗೆ ಸಂಬಂಧಿಸಿದಂತೆ ಬಾಲಕಿ ಪೋಷಕರು ಪ್ರಕರಣ ದಾಖಲು ಮಾಡಿದ್ದರು. ಬಾಲಕಿಗೆ ಪರಿಚಯವಿರುವ ವ್ಯಕ್ತಿಯೊಬ್ಬ ಕೊಡ್ಲಾ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದನು. ಇದಾದ ಬಳಿಕ ಕಾರಿನಲ್ಲಿ ಕುಳ್ಳಿರಿಸಿಕೊಂಡು MIG ಪ್ಲಾಟ್ಗೆ ಕರೆದುಕೊಂಡು ಹೋಗಿ, ತನ್ನ ಸ್ನೇಹಿತರೊಂದಿಗೆ ಸೇರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದನು.
ಘಟನೆ ನಂತರ ಆಕೆಯನ್ನ ರಸ್ತೆವೊಂದರಲ್ಲಿ ಬಿಟ್ಟು, ಇದರ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದರೆ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಆದರೆ, ಬಾಲಕಿ ತನ್ನ ಮೇಲೆ ನಡೆದ ದುಷ್ಕೃತ್ಯದ ಬಗ್ಗೆ ಮನೆಯಲ್ಲಿ ಮಾಹಿತಿ ನೀಡಿದ್ದಳು. ಇದಾದ ಬಳಿಕ ಪ್ರಕರಣ ದಾಖಲು ಮಾಡಲಾಗಿತ್ತು. ದೂರು ದಾಖಲು ಮಾಡಿಕೊಂಡು ಶೋಧಕಾರ್ಯ ಆರಂಭಿಸಿದ ಪೊಲೀಸರು ಮೂವರ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೋರ್ವ ಆರೋಪಿಗೋಸ್ಕರ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಅಭಯ ಕುಮಾರ್ ಮಿಶ್ರಾ ತಿಳಿಸಿದ್ದಾರೆ.