ನವದೆಹಲಿ/ಗಾಜಿಯಾಬಾದ್: ಗಾಜಿಪುರ ಗಡಿಯಲ್ಲಿ ಬುಧವಾರ ಬೆಳಿಗ್ಗೆ ಬಿಜೆಪಿ ಕಾರ್ಯಕರ್ತರು ಮತ್ತು ರೈತರ ನಡುವೆ ಗಲಭೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ 200 ಜನರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಘಟನೆಯ ವಿಡಿಯೋ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮಾಹಿತಿ ಪ್ರಕಾರ, ಪೊಲೀಸರು ಈ ಘಟನೆಗೆ ಸಂಬಂಧಿಸಿದ ಎಲ್ಲ ವಿಡಿಯೋಗಳನ್ನು ಸೆರೆಹಿಡಿದಿದ್ದು, ವಿಡಿಯೋ ಆಧಾರದ ಮೇಲೆ ಆರೋಪಿಗಳನ್ನು ಗುರುತಿಸಲಾಗುತ್ತಿದೆ. ಗಲಭೆಯಲ್ಲಿ ವಾಹನಗಳನ್ನು ಧ್ವಂಸಗೊಳಿಸಿದ್ದು, ಇದರ ವೀಡಿಯೊ ಸಹ ಸೆರೆಯಾಗಿದೆ. ಇನ್ನು ಘಟನೆ ಸಂಬಂಧ ಭಾರತೀಯ ಕಿಸಾನ್ ಒಕ್ಕೂಟದ ಕಾರ್ಯಕರ್ತರು ಕೌಶಂಬಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.