ಗಾಜಿಯಾಬಾದ್:ದೆಹಲಿಯ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದರಿಂದ ಸ್ಥಳೀಯ ನಿವಾಸಿಗಳು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರೈತ ಪ್ರತಿಭಟನೆಯನ್ನು ವಿರೋಧಿಸಿ ಗಾಜಿಪುರ ಗಡಿ ಬಳಿ ಸ್ಥಳೀಯರು ಧರಣಿ ನಡೆಸಿದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 80 ದಿನಗಳಿಂದ ರಾಷ್ಟ್ರ ರಾಜಧಾನಿಯ ವಿವಿಧ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೆ ಜ. 26 ರ ಗಣರಾಜ್ಯೋತ್ಸವದಂದು ಕೆಂಪುಕೋಟೆಯಲ್ಲಿ ಹಿಂಸಾಚಾರ ನಡೆಸಿದ್ದರು. ಇದರಿಂದ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಗಡಿಯ ಸಮೀಪದ ರಸ್ತೆಗಳಿಗೆ ಬ್ಯಾರಿಕೇಡ್‌ಗಳನ್ನು ಹಾಕಿ ಸಂಚಾರಕ್ಕೆ ತಡೆ ಒಡ್ಡಿದ್ದಾರೆ.