ಬರಾಬಂಕಿ(ಉತ್ತರ ಪ್ರದೇಶ): ಉತ್ತರ ಪ್ರದೇಶದಲ್ಲಿಮತ್ತೊಂದು ಅಮಾನವೀಯ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿವೋರ್ವಳ ಮೇಲೆ ನಾಲ್ವರು ಕಾಮುಕರು ಅತ್ಯಾಚಾರವೆಸಗಿದ್ದಾರೆ.
ಉತ್ತರ ಪ್ರದೇಶದ ಜಡೀಪುರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿನಿ ಶಾಲೆಗೆ ತೆರಳುತ್ತಿದ್ದ ವೇಳೆ ನಾಲ್ವರು ಕಾಮುಕರು ಆಕೆಯ ಅಪಹರಣ ಮಾಡಿದ್ದು, ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಈ ವಿಚಾರವನ್ನು ವಿದ್ಯಾರ್ಥಿನಿ ತಿಳಿಸಿದ್ದಾಳೆ. ಜತೆಗೆ ಕುಟುಂಬಸ್ಥರಿಗೆ ಇದರ ಬಗ್ಗೆ ಮಾಹಿತಿ ನೀಡಿದ್ದಾಳೆ. ಇದಾದ ಬಳಿಕ ಪೋಷಕರೊಂದಿಗೆ ತೆರಳಿ ದೂರು ದಾಖಲಿಸಿದ್ದಾಳೆ.