ಅಲ್ವಾರ್(ರಾಜಸ್ಥಾನ): ಸಾಮೂಹಿಕ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಮನ ಕಲಕುವ ಘಟನೆ ಅಲ್ವಾರ್ ಜಿಲ್ಲೆಯ ನೌಗಾವಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಅಪ್ರಾಪ್ತ ವಯಸ್ಸಿನ ಬಾಲಕಿಯ ಕುಟುಂಬವು ಮೂವರು ಯುವಕರ ವಿರುದ್ಧ ಸಾಮೂಹಿಕ ಅತ್ಯಾಚಾರ ಆರೋಪದ ಕುರಿತು ದೂರು ನೀಡಿದೆ. ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳನ್ನು ಬಂಧಿಸಲು ತಂಡವನ್ನು ರಚಿಸಿ ಶೋಧ ಕಾರ್ಯ ನಡೆಸಿದ್ದಾರೆ.
ದನ ಮೇಯಿಸಲು ಹೋಗಿದ್ದ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಗ್ರಾಮದ ಮೂವರು ಬಲವಂತವಾಗಿ ಅತ್ಯಾಚಾರವೆಸಗಿದ್ದಾರೆ. ಕಳೆದ ಮೂರ್ನಾಲ್ಕು ತಿಂಗಳಿಂದ ನಿರಂತರ ಅತ್ಯಾಚಾರ ನಂತರ ಸಂತ್ರಸ್ತೆ ಖಿನ್ನತೆಗೆ ಒಳಗಾಗಿದ್ದು. ಬಾಲಕಿ ಶನಿವಾರ ತಡ ರಾತ್ರಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನೆಯ ಮಾಹಿತಿಯ ಮೇರೆಗೆ ನೌಗಾವಾನ್ ಪೊಲೀಸ್ ಠಾಣಾಧಿಕಾರಿ ಸುನಿಲ್ ಟ್ಯಾಂಕ್ ಮೃತ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮತ್ತು ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಮಗಢ ಸಿಎಚ್‌ಸಿಗೆ ಕಳುಹಿಸಿ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.
ಈ ಘಟನೆಯ ನಂತರ ಆರೋಪಿಗಳನ್ನು ಪತ್ತೆಗೆ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆದರೆ ಆರೋಪಿಗಳು ಪೊಲೀಸರ ಕೈಗೆ ಇನ್ನೂ ಸಿಕ್ಕಿಲ್ಲ. ತನ್ನ ಅಪ್ರಾಪ್ತ ಮಗಳ ಮರಣೋತ್ತರ ಪರೀಕ್ಷೆಗಾಗಿ ರಾಮಗಢ ಸಿಎಚ್‌ಸಿಗೆ ಬಂದಿದ್ದ ಬಾಲಕಿಯ ತಂದೆ ಗ್ರಾಮದ ಮೂವರು ತನ್ನ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.