ರಾಂಚಿ (ಜಾರ್ಖಂಡ್): ರಾಂಚಿ ಜಿಲ್ಲೆಯಲ್ಲಿ ಬಾಲಕಿಯೊಬ್ಬಳ ಮೇಲೆ ಏಳು ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರು ಹೇಳಿಕೆ ನೀಡಿದ್ದು, ಈ ಘಟನೆ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಇನ್ನುಳಿದ ಮೂವರು ತಲೆಮರೆಸಿಕೊಂಡಿದ್ದು, ಶೋಧಕಾರ್ಯ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
ಈ ಕೃತ್ಯ ಆಗಸ್ಟ್ 26ರಂದು ನಡೆದಿದೆ. ಆರೋಪಿಗಳಲ್ಲಿ ಒಬ್ಬ ಸಂತ್ರಸ್ತೆಗೆ ಪರಿಚಿತನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಚಯಸ್ಥ ಬಾಲಕ ಇನ್ನುಳಿದ ಆರು ಜನರು ಕಾಯುತ್ತಿದ್ದ ಸ್ಥಳಕ್ಕೆ ಬಾಲಕಿಯನ್ನು ಬೈಕ್ನಲ್ಲಿ ಕರೆದುಕೊಂಡು ಹೋಗಿದ್ದಾನೆ. ಆ ಹುಡುಗರನ್ನು ನೋಡಿದ ಬಾಲಕಿ ಓಡಲು ಯತ್ನಿಸಿದ್ದಾಳೆ. ಆದರೆ ದುರುಳರು ಅವಳನ್ನು ಹಿಡಿದು ತಂದು ದುಷ್ಕೃತ್ಯ ಎಸಗಿರುವುದು ತನಿಖೆಯಿಂದ ತಿಳಿದು ಬಂದಿದೆ.