ನಳಂದಾ(ಬಿಹಾರ): ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಗುಂಡು ತಗುಲಿ 12 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬಿಹಾರದ ನಳಂದ ಜಿಲ್ಲೆಯ ಗಂಜ್ಪರ್ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಬಾಲೋ ಯಾದವ್ ಪುತ್ರಿ ತುಶಿ ಕುಮಾರಿ ಎಂದು ಗುರುತಿಸಲಾಗಿದೆ.
ನೆರೆಮನೆಯ ಕಾರ್ಯಕ್ರಮವೊಂದಕ್ಕೆ ಹೋದ ವೇಳೆ ಈ ದುರ್ಘಟನೆ ಸಂಭವಿಸಿದೆ. ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ನೃತ್ಯ ಕಾರ್ಯಕ್ರಮವನ್ನು ವೀಕ್ಷಿಸಲು ಬಾಲಕಿ ತೆರಳಿದ್ದಳು. ಆ ವೇಳೆ ಅಪರಿಚಿತ ವ್ಯಕ್ತಿಯಿಂದ ಗುಂಡಿನ ದಾಳಿ ನಡೆದಿದೆ. ದಾಳಿಯಲ್ಲಿ ಗಾಯಗೊಂಡ ಪರಿಣಾಮ ಬಾಲಕಿ ಮೃತಪಟ್ಟಿದ್ದಾಳೆ.