ಬಿಜ್ನೋರ್(ಉತ್ತರ ಪ್ರದೇಶ): ಎಂಟು ವರ್ಷದ ಬಾಲಕಿಯ ಮೇಲೆ 10 ವರ್ಷದ ಬಾಲಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಬುಧವಾರ ನಡೆದಿದೆ. ಅತ್ಯಾಚಾರ ಘಟನೆಯ ಬಗ್ಗೆ ಬಾಲಕಿಯು ತನ್ನ ಪೋಷಕರಿಗೆ ತಿಳಿಸಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಂತ್ರಸ್ತೆಯ ಕುಟುಂಬದವರು ಪೊಲೀಸ್ ಠಾಣೆಗೆ ಧಾವಿಸಿ ಘಟನೆಯ ಬಗ್ಗೆ ದೂರು ದಾಖಲಿಸಿದ್ದಾರೆ. "ಧಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ರೈತನೊಬ್ಬ ತನ್ನ ಪತ್ನಿಯೊಂದಿಗೆ ಹೊಲದ ಕೆಲಸಕ್ಕೆ ಹೋಗಿದ್ದ. ಈ ಸಮಯದಲ್ಲಿ ಬಾಲಕಿ ಕೂಡ ತನ್ನ ತಂದೆ ತಾಯಿಯನ್ನು ಹಿಂಬಾಲಿಸಿ ಹೊಲದ ಕಡೆ ಹೊರಟಿದ್ದಳು, ಮಧ್ಯ ದಾರಿಯಲ್ಲಿ ಇದ್ದಕ್ಕಿದ್ದಂತೆ ಅದೇ ಗ್ರಾಮದ 10 ವರ್ಷದ ಬಾಲಕನೊಬ್ಬ ಬಂದು, ಬಾಲಕಿಯನ್ನು ಬಲವಂತವಾಗಿ ಬೇರೆ ಜಮೀನಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಘಟನೆ ಬಗ್ಗೆ ಬಾಲಕಿ ಮನೆಗೆ ಬಂದು ಅತ್ಯಾಚಾರದ ಬಗ್ಗೆ ಪೋಷಕರಿಗೆ ತಿಳಿಸಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪೋಷಕರ ದೂರಿನನ್ವಯ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಪೂರ್ವವಿಭಾಗದ ಎಸ್ಪಿ, ಧರಂಸಿಂಗ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ "ಜನವರಿ 11 ರಂದು, ಸಂತ್ರಸ್ತೆಯ ತಂದೆ ಬಾಲಕಿಯ ಮೇಲೆ ಅತ್ಯಾಚಾರದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು, ನಂತರ, ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ವಿಷಯದ ಬಗ್ಗೆ ತನಿಖೆ ನಡೆಸಿದರು, ಸಂತ್ರಸ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಬಾಲಕಿಯ ಪೋಷಕರು ನೀಡಿರುವ ದೂರಿನ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ,'' ಎಂದು ಹೇಳಿದ್ದಾರೆ.
"ಆರೋಪಿ ಬಾಲಕನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವೈದ್ಯಕೀಯ ವರದಿಗಳ ಆಧಾರದ ಮೇಲೆ ಬಾಲಕನನ್ನು ಬಾಲಾಪರಾಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿ, ನಂತರ ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗುವುದು" ಎಂದು ಎಸ್ಪಿ ಧರಂ ಸಿಂಗ್ ಮಾಹಿತಿ ನೀಡಿದ್ದಾರೆ.
ಸ್ವಂತ ಮಗಳನ್ನೆ ಕೊಂದ ಪಾಪಿ ತಂದೆ: ಅನ್ಯ ಜಾತಿಯ ಹುಡುಗನೊಂದಿಗೆ ಪ್ರೇಮ ಸಂಬಂಧ ಹೊಂದಿದ್ದಕ್ಕಾಗಿ ಸ್ವಂತ ಮಗಳನ್ನು ಕೊಂದ ಆರೋಪದ ಮೇಲೆ ತಂದೆ - ಮಗ ಇಬ್ಬರನ್ನು ಪೊಲೀಸರು ಗುರುವಾರ ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಐಂಚೋಡ ಕಾಂಬೋಹ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.