ಫತೇಪುರ(ಉತ್ತರಪ್ರದೇಶ): ಗುತ್ತಿಗೆದಾರನೊಬ್ಬ 15 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉತ್ತರಪ್ರದೇಶದ ಫತೇಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಭಾನುವಾರ ಪ್ರಕರಣ ದಾಖಲಾಗಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಪ್ರಕಾರ, ಸಂತ್ರಸ್ತೆಯ ತಂದೆ ಮತ್ತು ಸಹೋದರರಿಬ್ಬರೂ ತಮ್ಮದೇ ಊರಿನವನಾದ ಗುತ್ತಿಗೆದಾರನ ಬಳಿ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು.
ಇದನ್ನೂ ಓದಿ:ಪರಿಸರವಾದಿ ದಿಶಾ ರವಿ ಬಿಡುಗಡೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ
ಸಂತ್ರಸ್ತೆ ತನ್ನ ತಂಗಿ ಮತ್ತು ಅತ್ತಿಗೆಯೊಂದಿಗೆ ಗ್ರಾಮದಲ್ಲಿ ವಾಸವಾಗಿದ್ದಳು. ಊರಿಗೆ ಆಗಮಿಸಿದ ಗುತ್ತಿಗೆದಾರ ಯಾರೂ ಇಲ್ಲದ ವೇಳೆ ಬಾಲಕಿಯ ಮನೆಗೆ ನುಗ್ಗಿ, ಅತ್ಯಾಚಾರ ನಡೆಸಿದ್ದಾನೆ ಎಂದು ಜಫರ್ಗಂಜ್ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ರಾಜೀವ್ ಕುಮಾರ್ ಸಿಂಗ್ ಹೇಳಿದ್ದಾರೆ.
ಇದೇ ವೇಳೆ ಬಾಲಕಿಯ ಸಹೋದರಿ ತಡೆಯಲು ಯತ್ನಿಸಿದಾಗ, ಆಕೆಯ ಮೇಲೆಯೂ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ಅತ್ಯಾಚಾರ ಮಾಡಿದ ನಂತರ ಆರೋಪಿ ಮುಂಬೈಗೆ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದು, ತನಿಖೆ ನಡೆಸುತ್ತಿದ್ದಾರೆ.