ಜೋಧಪುರ(ರಾಜಸ್ಥಾನ) :ರಾಜಸ್ಥಾನದಲ್ಲಿ ಬೆಚ್ಚಿಬೀಳಿಸುವ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. 4ನೇ ತರಗತಿಯಲ್ಲಿ ಓದುತ್ತಿರುವ ಬಾಲಕನೊಬ್ಬ ತನ್ನ ಸಹಪಾಠಿಯ ಮೇಲೆ ಅತ್ಯಾಚಾರ ಮಾಡಿದ ಘಟನೆ ನಡೆದಿದೆ. ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಪ್ರಕರಣ ಏನು?:ಜೋಧಪುರ ಜಿಲ್ಲೆಯ ಮಾತಾ ಕಾ ಥಾನ್ ಎಂಬಲ್ಲಿಯ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ 10 ವರ್ಷದ ಬಾಲಕನೊಬ್ಬ ತನ್ನ ಸಹಪಾಠಿ ಬಾಲಕಿಯನ್ನು ಶೌಚಾಲಯಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ. ಬಳಿಕ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ.
ಸಂತ್ರಸ್ತ ಬಾಲಕಿ ನಡೆದ ಘಟನೆಯನ್ನು ತನ್ನ ತಾಯಿಯ ಬಳಿ ಹೇಳಿಕೊಂಡಿದ್ದಾಳೆ. ಬಾಲಕನ ವಿರುದ್ಧ ಸಂತ್ರಸ್ತೆ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕ ಅಪ್ರಾಪ್ತನಾದ ಕಾರಣ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಸತ್ಯಾಂಶಕ್ಕಾಗಿ ತನಿಖೆ ನಡೆಸುತ್ತಿದ್ದಾರೆ. ಸಂತ್ರಸ್ತೆಯನ್ನು ವೈದ್ಯಕೀಯ ತಪಾಸಣೆಗಾಗಿ ಆಸ್ಪಸತ್ರೆಗೆ ದಾಖಲಿಸಲಾಗಿದೆ.