ಕರ್ನಾಟಕ

karnataka

ETV Bharat / bharat

ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ವಿದ್ಯಾರ್ಥಿನಿಯರು ಸ್ನಾನ ಮಾಡುವ ದೃಶ್ಯಗಳ ಚಿತ್ರೀಕರಣ: ಕೆಲಸಗಾರ ಸೆರೆ - ರೂಮ್‌ಮೇಟ್‌

ಉತ್ತರ ಪ್ರದೇಶದ ಕಾನ್ಪುರದ ಹಾಸ್ಟೆಲ್‌ನ ಬಾತ್‌ರೂಮ್‌ನಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿನಿಯ ದೃಶ್ಯಗಳನ್ನು ವ್ಯಕ್ತಿಯೊಬ್ಬ ರಹಸ್ಯವಾಗಿ ವಿಡಿಯೋ ಮಾಡುತ್ತಿರುವುದನ್ನು ರೂಮ್‌ಮೇಟ್‌ ನೋಡಿ, ರೆಡ್ ಹ್ಯಾಂಡ್ ಆಗಿ ಹಿಡಿದು ಫೋನ್ ಕಸಿದುಕೊಂಡಿದ್ದಾರೆ.

girls-hostel-employee-made-objectionable-video-of-girls-in-kanpur
ಹಾಸ್ಟೆಲ್‌ನ ಬಾತ್‌ರೂಮ್‌ನಲ್ಲಿ ವಿದ್ಯಾರ್ಥಿನಿಯರ ಸ್ನಾನ ಮಾಡುವ ದೃಶ್ಯಗಳ ಚಿತ್ರೀಕರಣ: ಕೆಲಸಗಾರ ಸೆರೆ

By

Published : Sep 29, 2022, 10:44 PM IST

ಕಾನ್ಪುರ (ಉತ್ತರ ಪ್ರದೇಶ): ಕೆಲ ದಿನಗಳ ಹಿಂದೆ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಅಶ್ಲೀಲ ವಿಡಿಯೋ ವಿಷಯ ಸಾಕಷ್ಟು ವಿವಾದ ಎಬ್ಬಿಸಿತ್ತು. ಉತ್ತರ ಪ್ರದೇಶದ ಕಾನ್ಪುರದಲ್ಲೂ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಪ್ರಕರಣವೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ಹಾಸ್ಟೆಲ್‌ನಲ್ಲಿ ಹುಡುಗಿಯರ ಅಶ್ಲೀಲ ವಿಡಿಯೋಗಳ ರೆಕಾರ್ಡ್​ ಮಾಡಿರುವ ಆರೋಪ ಕೇಳಿ ಬಂದಿದೆ.

ಇಲ್ಲಿನ ತುಳಸಿ ನಗರದಲ್ಲಿರುವ ಬಾಲಕಿಯರ ಹಾಸ್ಟೆಲ್‌ನಲ್ಲಿ ಕ್ಲೀನಿಂಗ್ ಕೆಲಸ ಮಾಡುತ್ತಿದ್ದ ರಿಷಿ ಎಂಬಾತ ರಹಸ್ಯವಾಗಿ ವಿದ್ಯಾರ್ಥಿನಿಯರ ದೃಶ್ಯಗಳನ್ನು ಚಿತ್ರೀಕರಿಸಿದ್ದ ಎಂದು ಹೇಳಲಾಗಿದೆ. ಅಶ್ಲೀಲ ವಿಡಿಯೋ ಮಾಡುತ್ತಿದ್ದಾಗ ಈ ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿರುವುದಾಗಿ ವಿದ್ಯಾರ್ಥಿಗಳು ಹೇಳಿದ್ದಾರೆ.

ಗುರುವಾರ ವಿದ್ಯಾರ್ಥಿನಿಯೊಬ್ಬಳು ತನ್ನ ರೂಮ್‌ಮೇಟ್‌ ಬಾತ್‌ರೂಮ್‌ನಲ್ಲಿ ಸ್ನಾನ ಮಾಡುತ್ತಿದ್ದಾಗ ಆರೋಪಿ ರಿಷಿ ರಹಸ್ಯವಾಗಿ ವಿಡಿಯೋ ಮಾಡುತ್ತಿರುವುದು ನೋಡಿದ್ದಾರೆ. ಆಗ ಆತನನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಫೋನ್ ಕಸಿದುಕೊಂಡಿದ್ದಾರೆ. ನಂತರ ಇತರ ವಿದ್ಯಾರ್ಥಿಗಳು ಸಹ ಜಮಾಯಿಸಿ, ಫೋನ್​ ಪರಿಶೀಲನೆ ಮಾಡಿದ್ದಾರೆ. ಅನೇಕ ಹುಡುಗಿಯರ ವಿಡಿಯೋಗಳು ಸಹ ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.

ಈ ಆರೋಪಿಗೆ ವಾರ್ಡನ್ ಬೆಂಬಲ ನೀಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪ ಮಾಡಿದ್ದು, ಹಾಸ್ಟೆಲ್‌ನಲ್ಲಿ ಗಲಾಟೆ ಸೃಷ್ಟಿಸಿದ್ದಾರೆ. ಈ ವಿಷಯ ತಿಳಿದ ರಾವತ್‌ಪುರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಬಗ್ಗೆ ಹೆಚ್ಚಿನ ತನಿಖೆ ಸಹ ನಡೆಸಲಾಗುತ್ತಿದೆ.

ಇದನ್ನೂ ಓದಿ:ಕಾಸರಗೋಡು ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗೆ ರ‍್ಯಾಗಿಂಗ್.. ವಿಡಿಯೋ ವೈರಲ್​

ABOUT THE AUTHOR

...view details