ಥಾಣೆ (ಮಹಾರಾಷ್ಟ್ರ): ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಘಟನೆ ಇಂದು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ತಾಲೂಕಿನಲ್ಲಿ ನಡೆದಿದೆ. ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿ ಇತರೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಇಲ್ಲಿನ ವಾಲ್ಪಾಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಸ್ನಾಥ್ ಕಾಂಪೌಂಡ್‌ನಲ್ಲಿರುವ ವರ್ಧಮಾನ್ ಎಂಬ ಮೂರು ಅಂತಸ್ತಿನ ಕಟ್ಟಡವು ಮಧ್ಯಾಹ್ನ 2 ಗಂಟೆ ಸುಮಾರಿಗೆ ಕುಸಿದು ಬಿದ್ದಿದೆ. ಈ ಕಟ್ಟಡವು ಮೂರರಿಂದ ನಾಲ್ಕು ವಿವಿಧ ಕಂಪನಿಗಳ ಗೋದಾಮುಗಳನ್ನು ಹೊಂದಿದೆ. ಕಟ್ಟಡದ ಮೇಲ್ಮಹಡಿಯಲ್ಲಿ ಕೆಲ 10ರಿಂದ 15 ಕೂಲಿ ಕಾರ್ಮಿಕರ ಕುಟುಂಬಗಳು ವಾಸವಾಗಿದ್ದವು ಎಂದು ತಿಳಿದು ಬಂದಿದೆ.