ನವದೆಹಲಿ:ಭಾರತೀಯ ಚಿನಿವಾರ ಮಾರುಕಟ್ಟೆ ಈ ದಿನದ ಚಿನ್ನ ಮತ್ತು ಬೆಳ್ಳಿಯ ಬೆಲೆಗಳನ್ನು ಬಿಡುಗಡೆ ಮಾಡಿದೆ. ದೇಶದಲ್ಲಿ 24 ಕ್ಯಾರೆಟ್ ಶುದ್ಧತೆಯ 10 ಗ್ರಾಂ ಚಿನ್ನ 52,470 ರೂ.ಗೆ ಮಾರಾಟವಾಗುತ್ತಿದ್ದು, ಒಂದು ಕೆಜಿ ಬೆಳ್ಳಿಯ ದರ 58,900 ರೂ.ಗೆ ಮಾರಾಟವಾಗುತ್ತಿದೆ.
ಮುಂಬೈ, ದೆಹಲಿ, ಹೈದರಾಬಾದ್ ಮತ್ತು ಕೋಲ್ಕತ್ತಾ ಸೇರಿದಂತೆ ಬಹುತೇಕ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,100 ರೂಪಾಯಿ ಮತ್ತು 24 ಕ್ಯಾರೆಟ್ 52,470 ಇದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 48,130 ರೂ., 24 ಕ್ಯಾರೆಟ್ ಚಿನ್ನ 52,500 ಹಾಗೂ ಚೆನ್ನೈನಲ್ಲಿ 22 ಕ್ಯಾರೆಟ್ ಚಿನ್ನ 48,050 ರೂ., 24 ಕ್ಯಾರೆಟ್ ಚಿನ್ನ 52,420 ರೂ.ಗೆ ಮಾರಾಟವಾಗುತ್ತಿದೆ.